ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರೋಟರಿ ಸೆಂಟ್ರಲ್‌ನಿಂದ ಉಚಿತ ಲ್ಯಾಪ್‌ಟಾಪ್ ವಿತರಣೆ-ಶಿವರಾಜ್ 

ಶಿವಮೊಗ್ಗ: ಅರ್ಹರಿಗೆ ಸೇವೆಯ ಮುಖಾಂತರ ಅಗತ್ಯ ಸೌಕರ್ಯಗಳನ್ನು ಒದಗಿಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ತರವಾಗಿದ್ದು, ನಮ್ಮ ಸಂಸ್ಥೆಯಿಂದ ನಿರಂತರವಾಗಿ ಸಮಾಜಮುಖಿ ಕೆಲಸಗಳನ್ನು ನಡೆಸಲಾಗುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಶಿವರಾಜ್ ಹೇಳಿದರು.

ಶಿವಮೊಗ್ಗ ನಗರದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನ ಹಾಗೂ ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೋಟರಿ ಸಂಸ್ಥೆಯು ವಿಶ್ವಾದ್ಯಂತ ಕ್ಲಬ್‌ಗಳನ್ನು ಹೊಂದಿದ್ದು, ವಿಶೇಷವಾಗಿ ಸೇವಾ ಕಾರ್ಯಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸೇವೆಯನ್ನು ನಡೆಸಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲಿಯೂ ಎಲ್ಲ ಸದಸ್ಯರ ಸಹಕಾರದಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಮಾಜಿ ಗವರ್ನರ್ ಜಿ.ಎನ್.ಪ್ರಕಾಶ್ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವುದು. ಆರ್ಥಿಕ ಸಂಕಷ್ಟದಲ್ಲಿ ಇರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಅವಶ್ಯಕತೆ ಇರುವ ವಸ್ತುಗಳನ್ನು ನೀಡುವುದು. ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳುವುದು ಸೇರಿದಂತೆ ರೋಟರಿ ಸಂಸ್ಥೆಯಿಂದ ವೈವಿಧ್ಯ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ಬಡ ಹೆಣ್ಣು ಮಕ್ಕಳಿಗೆ ಲ್ಯಾಪ್‌ಟಾಪ್ ಅನ್ನು ಉಚಿತವಾಗಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ರಮೇಶ್ ಎನ್, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಕಿರಣ್ ಕುಮಾರ್.ಜಿ, ವಿನೋದ್ ಕುಮಾರ್ ಗುಜ್ಜಾಡಿ, ಆನ್ಸ್ ಕ್ಲಬ್ ಅಧ್ಯಕ್ಷೆ ಸೀಮಾ ಶಿವರಾಜ್, ಆನ್ಸ್ ಕಾರ್ಯದರ್ಶಿ ದೀಪಾ ಶೆಟ್ಟಿ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ವಾರ್ಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ.

ಜಿಲ್ಲೆಯ ಎಲ್ಲಾ ಗ್ರಾ.ಪಂ ಪಿಡಿಒಗಳು ತಮ್ಮ ಕಾರ್ಯನಿರ್ವಹಣೆ ಸ್ಥಳದಲ್ಲಿಯೇ ವಾಸಿಸಬೇಕು-ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘ ಆಗ್ರಹ

ಡಿಕೆ ಶಿವಕುಮಾರ್ ವಿರುದ್ದ ಸಿಬಿಐ ತನಿಖೆ ವಾಪಸ್: ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ್.