ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಿಕಾ ವೈರಸ್ ಬಗ್ಗೆ ಭಯ ಬೇಡ: ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ.

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜಿಕಾ ವೈರಸ್ ಬಗ್ಗೆ ಭಯ ಬೇಡ.  ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿತ್ತು, ಜಿಕಾ ಬೇರೆ, ನಿಫಾ ಬೇರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಿಕಾ ವೈರಸ್​ ಪತ್ತೆಯಾಗಿದೆ. ಜಿಕಾ ಬಗ್ಗೆ ಭಯ ಬೇಡ, ಬಾಣಂತಿಯರು ಎಚ್ಚರಿಕೆಯಿಂದ ಇರಬೇಕು. ಸೊಳ್ಳೆಗಳಲ್ಲಿ ಜಿಕಾ ಕಾಣಿಸಿಕೊಂಡಿದ್ದು,  ಮನುಷ್ಯರಿಗೆ ಹರಡಿಲ್ಲ ಎಂದರು.

ಜಿಕಾ ಪತ್ತೆ ಹಿನ್ನೆಲೆ ಆಸ್ಪತ್ರೆಯಲ್ಲಿ ಇದ್ದವರಿಗೆ ಪರೀಕ್ಷೆ ಮಾಡಲಾಗಿದೆ. ಜಿಕಾ ವೈರಸ್​ ಲಕ್ಷಣ ಇದ್ದವರ ಸ್ಯಾಂಪಲ್ ಪಡೆಯಲಾಗಿದೆ. ಇನ್ನು 3 ದಿನಗಳಲ್ಲಿ ಟೆಸ್ಟ್​ಗೆ ಒಳಪಟ್ಟವರ ವರದಿ ಬರುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Related posts

ಬಿಎಲ್ ಸಂತೋಷ್ ಮೊದಲು ಬಿಜೆಪಿಯಲ್ಲಿರುವವರನ್ನ ಉಳಿಸಿಕೊಳ್ಳಲಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್.

ಮಕ್ಕಳ ಮೊಬೈಲ್, ಟಿವಿ ವೀಕ್ಷಣೆಗೆ ಬೀಳಬೇಕಿದೆ ಕಡಿವಾಣ: ಇಲ್ಲದಿದ್ರೆ ಸಮಸ್ಯೆ ಕಟ್ಟಿಟ್ಟ ಬುತ್ತಿ..

ಯೋಧರು , ರಾಜಮಹಾರಾಜರು ಮತ್ತು ದೇಶದ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಲು ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ ಯಾತ್ರೆ-ಸಂಸದ ಬಿ.ವೈ. ರಾಘವೇಂದ್ರ