ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮೂರ್ನಾಲ್ಕು ತಿಂಗಳಲ್ಲಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧ- ಡಿಸಿಎಂ ಡಿ.ಕೆ ಶಿವಕುಮಾರ್.

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಮೂರ್ನಾಲ್ಕು ತಿಂಗಳಲ್ಲಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಬಿಜೆಪಿಗೆ ವಿಪಕ್ಷ ನಾಯಕರನ್ನೇ ಆಯ್ಕೆ ಮಾಡಲು ಆಗುತ್ತಿಲ್ಲ. ಸರ್ಕಾರ ರಚನೆಯಾಗಿ ಐದು ತಿಂಗಳಾದರೂ ವಿಪಕ್ಷ ನಾಯಕನಿಲ್ಲ ಎಂದು ಟೀಕಿಸಿದರು.

ಮೂರ್ನಾಲ್ಕು ತಿಂಗಳಲ್ಲಿ ಲೋಕಸಭಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ವೀಕ್ಷಕರು ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ. ಎಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ವೀಕ್ಷಕರು ಇನ್ನೂ ವರದಿಯನ್ನು ಕೊಟ್ಟಿಲ್ಲ ಎಂದರು.

ಬಿಜೆಪಿಯವರು ಬರ ಸಮೀಕ್ಷೆ ಮಾಡಲಿ. ಕೇಂದ್ರಕ್ಕೆ ವರದಿ ಸಲ್ಲಿಸಲಿ. ಈಗಾಗಲೇ 175 ತಾಲ್ಲೂಕುಗಳನ್ನ ಬರ ಪೀಡಿತ ಎಂಧು ಘೋಷಣೆ ಮಾಡಲಾಗಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Related posts

ಡಿಸಿಎಂ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ನೋಟಿಸ್.

ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ `ಶೈಕ್ಷಣಿಕ ಪ್ರವಾಸ’ : ಹಲವು ಷರತ್ತುಗಳನ್ನು ವಿಧಿಸಿದ ಶಿಕ್ಷಣ ಇಲಾಖೆ

 ನ.27 ರಂದು ಶಿರಾಳಕೊಪ್ಪ ಬಸವೇಶ್ವರ ಸಹಕಾರ ಬ್ಯಾಂಕ್ ನ 111ನೇ ವಾರ್ಷಿಕೋತ್ಸವ