ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ವೃದ್ಧಿ-ಜಿ.ವಿಜಯ್‌ಕುಮಾರ್

ಶಿವಮೊಗ್ಗ: ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಸೇವಾ ಮನೋಭಾವನೆ ವೃದ್ಧಿಸುವ ಜತೆಯಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್ ಹೇಳಿದರು.

ಜಾವಳ್ಳಿ ಜ್ಞಾನದೀಪ ಶಾಲೆಯಲ್ಲಿ ಜ್ಞಾನದೀಪ ಸೀನಿಯರ್ ಸೆಕೆಂಡರಿ ಸ್ಕೂಲ್ ಹಾಗೂ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಶಿವಮೊಗ್ಗ ಶಾಖೆ ವತಿಯಿಂದ ಆಯೋಜಿಸಿದ್ದ ಎರಡು ದಿನದ ಬನ್ನಿ, ಕಬ್, ಬುಲ್ ಬುಲ್, ಸ್ಕೌಟ್ ಅಂಡ್ ಗೈಡ್ಸ್ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ವಿಶ್ವಾದ್ಯಂತ ಮನುಕುಲದ ಸೇವೆಯಲ್ಲಿ ಹಾಗೂ ಸೇವಾ ಮನೋಭಾವನೆಯನ್ನು ಮೂಡಿಸಲು ಸ್ಕೌಟ್ ಅಂಡ್ ಗೈಡ್ಸ್ ಅತ್ಯಂತ ಪರಿಣಾಮಕಾರಿ ಕೆಲಸ ಮಾಡುತ್ತಿದೆ. ಜಾವಳ್ಳಿಯ ಶಿಬಿರವು ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವುದು ತುಂಬಾ ಸಂತೋಷವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಕ್ಕಳು ಇಂತಹ ಚಳುವಳಿಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ರಾಜ್ಯ ಸಹಾಯಕ ಆಯುಕ್ತೆ ( ಗೈಡ್ಸ್ ) ಭಾರತಿ ಡಾಯಸ್ ಮಾತನಾಡಿ, ಜ್ಞಾನದೀಪ ಶಾಲೆಯಲ್ಲಿನ ಬನ್ನಿ, ಕಬ್, ಬುಲ್ ಬುಲ್, ಸ್ಕೌಟ್ಸ್ ಅಂಡ್ ಗೈಡ್ಸ್ ಎಲ್ಲಾ ದಳಗಳು ಸಕ್ರಿಯವಾಗಿ ಚಟುವಟಿಕೆಗಳನ್ನು ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.

ಜ್ಞಾನದೀಪ ವಿದ್ಯಾ ಸಂಸ್ಥೆಯ ಖಜಾಂಚಿ ಡಾ. ಕೆ.ಆರ್. ಶ್ರೀಧರ್ ಮಾತನಾಡಿ, ಎಲ್ಲಾ ಮಕ್ಕಳು ಶಿಬಿರದಲ್ಲಿ ಪಡೆದುಕೊಂಡ ಅನುಭವಗಳನ್ನು ನಿಮ್ಮ ಮನೆಗಳಲ್ಲಿನ ಸದಸ್ಯರೊಂದಿಗೆ ಹಂಚಿಕೊಳ್ಳಬೇಕು. ಇದರಿಂದ ಇತರರಿಗೂ ಪ್ರೇರಣೆ ಸಿಗುತ್ತದೆ ಎಂದು ಹೇಳಿದರು.

ಎರಡು ದಿನಗಳ ಶಿಬಿರದಲ್ಲಿ ಜ್ಞಾನದೀಪ ಶಾಲೆಯ ಬನ್ನಿ, ಕಬ್, ಬುಲ್, ಸ್ಕೌಟ್ಸ್ ಅಂಡ್ ಗೈಡ್ಸ್ ಸೇರಿ ಒಟ್ಟು 316 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ತಲವಾನೆ ಪ್ರಕಾಶ್ ಅವರು ಶಿಬಿರಾರ್ಥಿಗಳಿಗೆ ಶುಭಕೋರಿದರು.

ಅಧ್ಯಕ್ಷತೆ ವಹಿಸಿದ್ದ ಜ್ಞಾನದೀಪ ಸೀನಿಯರ್ ಸೆಕೆಂಡರಿ ಸ್ಕೂಲ್ ಪ್ರಾಚಾರ್ಯ ಶ್ರೀಕಾಂತ ಎಂ ಹೆಗ್ಡೆ ಮಾತನಾಡಿ, ನಾವು ಹಲವು ವರ್ಷಗಳಿಂದ ಕಂಡ ಕನಸು ಇಂದು ನನಸಾಗಿದೆ. ಇಂತಹ ಶಿಬಿರಗಳನ್ನು ಸಂಘಟಿಸಲು ನಮ್ಮ ಬೆಂಬಲ ಸದಾ ಇರುತ್ತದೆ. ಶಿಕ್ಷಕರು ಕ್ರಿಯಾಶೀಲರಾಗಿ ಸ್ಕೌಟ್ಸ್ ಚಟುವಟಿಕೆಗಳನ್ನು ಸದಾ ನಡೆಸುತ್ತಿರುತ್ತಾರೆ ಎಂದು ಹೇಳಿದರು.

ಶಿಬಿರದ ನಾಯಕ ರಾಜೇಶ್ ಅವಲಕ್ಕಿ ಮಾತನಾಡಿ, ಜ್ಞಾನದೀಪ ಶಾಲೆಯ ಸ್ಕೌಟ್ಸ್ ಸಾಧನೆಗಳು ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿವೆ. ಇನ್ನೂ ಹೆಚ್ಚಿನ ಸಾಧನೆ ನಿಮ್ಮದಾಗಬೇಕು ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಾತ್ಯಾಯಿನಿ, ಮೀನಾಕ್ಷಮ್ಮ, ಹೇಮಲತಾ, ಶಾಲೆಯ ಸ್ಕೌಟ್ ಮಾಸ್ಟರ್ ಕಬ್ ಮಾಸ್ಟರ್ ಪ್ಲಾಕ್ ಲೀಡರ್ ಬನ್ನಿ ಲೀಡರ್ಸ್ ಗಳು ಬನ್ನಿ, ಕಬ್, ಬುಲ್ ಬುಲ್, ಸ್ಕೌಟ್, ಗೈಡ್ ಮಕ್ಕಳು ಹಾಜರಿದ್ದರು.

ಶಾಲೆಯ ಉಪಪ್ರಾಚಾರ್ಯೆ ವಾಣಿ ಕೃಷ್ಣಪ್ರಸಾದ್ ವಂದಿಸಿದರು. ಶಾಲಾ ಮಕ್ಕಳು ಪ್ರಾರ್ಥಿಸಿದರು. ಶಾಲೆಯ ಸ್ಕೌಟ್ಸ್ ಮಾಸ್ಟರ್ ಶ್ರೀಕಾಂತ ಗೋಸಾವಿ ನಿರೂಪಿಸಿದರು. ಕಾರ್ಯದರ್ಶಿ ನೀಲಕಂಠ ಮೂರ್ತಿ, ರೆಡಿ ಜೋಸೆಫ್ ಉಪಸ್ಥಿತರಿದ್ದರು.

Related posts

ರಾಜ್ಯದಲ್ಲಿ ಬರಗಾಲ: ಕೇಂದ್ರ ಸರ್ಕಾರ ನೆರವಿಗೆ ಬರುವಂತೆ ಆಗ್ರಹ.

ನ.17ರಿಂದ 25ರವರೆಗೆ ಅಂತರರಾಜ್ಯ ಮಹಿಳಾ ಕ್ರಿಕೆಟ್ ಪಂದ್ಯಾವಳಿ

ಕಾಂಗ್ರೆಸ್ ನಿಂದ ಗೆದ್ದು ಬೇರೆ ಪಕ್ಷದ ಪರ ಪ್ರಚಾರ ನಡೆಸಿದ್ನಾದ ಲ್ವರು ಪುರಸಭೆ ಸದಸ್ಯರ ಸದಸ್ಯತ್ವ ಅನರ್ಹ.