ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಭಾರಿ ಮಳೆಗೆ ಬೆಂಗಳೂರು ತತ್ತರ: ತಡರಾತ್ರಿ ಬಿಬಿಎಂಪಿ ವಾರ್ ರೂಮ್ ಗೆ ಭೇಟಿ ನೀಡಿ ಡಿಸಿಎಂ ಡಿ.ಕೆ ಶಿವಕುಮಾರ್ ಪರಿಶೀಲನೆ.

ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಜನರು ತತ್ತರಿಸಿದ್ದು, ಮಳೆಯಿಂದ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ.

ನಿನ್ನೆ ರಾತ್ರಿ ಬೆಂಗಳೂರು ಮೈಸೂರು, ಮಂಡ್ಯ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಿದೆ. ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಬೆಂಗಳೂರಿನಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತ್ತು. ಅಂಡರ್​ಪಾಸ್​ಗಳಲ್ಲಿ ನೀರು ನಿಂತು ಪ್ರಯಾಣಿಕರು ಪರದಾಡುವಂತಾಯಿತು. ಭಾರಿ ಮಳೆಯಾಗುತ್ತಿದ್ದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್​ ಬಿಬಿಎಂಪಿಯ ವಾರ್ ರೂಂಗೆ ದಿಢೀರ್ ಭೇಟಿ ನೀಡಿದ್ದರು.

ತಡರಾತ್ರಿ ಬಿಬಿಎಂಪಿಯ ವಾರ್ ರೂಂಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿದರು.

ಮಳೆಯಿಂದಾಗಿ ನಗರದ ವಿವಿಧ ಭಾಗಗಳಲ್ಲಿ  ಉಂಟಾಗಿರುವ ಸಮಸ್ಯೆಗಳನ್ನು ಪರಿಶೀಲಿಸಿ,  ವಾರ್ ರೂಮ್ ಗೆ ಬಂದ ಕರೆ ಸ್ವೀಕರಿಸಿ ಮಾತನಾಡಿದರು. ಬಿಬಿಎಂಪಿ‌ ಕೇಂದ್ರ ಕಚೇರಿಯ ಕಂಟ್ರೋಲ್ ರೂಂ, ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ ಗಳಿಗೆ ಭೇಟಿ ನೀಡಿ ಮಳೆಯಿಂದ ಉಂಟಾದ ಅನಾಹುತಗಳ ಪರಿವೀಕ್ಷಣೆ ಮಾಡಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು, ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿದರು.

8 ವಲಯಗಳ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಆಯಾ ವಲಯಗಳಲ್ಲಿ ನಿನ್ನೆ ರಾತ್ರಿಯಿಂದ ಇಂದು ಬೆಳಗಿನವರೆಗೆ ಕಾರ್ಯನಿರ್ವಹಿಸಿ, ಮಳೆಯಿಂದಾದ ಅನಾಹುತಗಳನ್ನು ಪರಿವೀಕ್ಷಿಸಿದರು.

ಈಗ ವಿಪತ್ತು ನಿರ್ವಹಣಾ ಕೋಶದ ಅಧಿಕಾರಿಗಳು ಅವಘಡಗಳು ಸಂಭವಿಸಿದ ಸ್ಥಳಗಳಲ್ಲಿ ಹಾಜರಿದ್ದು, ನೀರನ್ನು ತೆರವು ಗೊಳಿಸುತ್ತಿದ್ದಾರೆ.

Related posts

ವಿವಿಧ ಪಂದ್ಯಾವಳಿಗಳಲ್ಲಿ ನಿದಿಗೆ-ಬಿ.ಬೀರನಹಳ್ಳಿ ಸರ್ಕಾರಿ ಶಾಲೆ ಮಕ್ಕಳಿಂದ ಅತ್ಯುತ್ತಮ ಪ್ರದರ್ಶನ: ಅಭಿನಂದನೆ.

ಆಭರಣಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ…

ವಿಶ್ವದ ಟಾಪ್ 10 ಪ್ರವಾಸಿ ತಾಣಗಳಲ್ಲಿ ಕೊಡಗು ಜಿಲ್ಲೆಗೆ 7 ನೇ ಸ್ಥಾನ

TOD News