ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಕಡೆ NIA ದಾಳಿ: 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ.

 

ಬೆಂಗಳೂರು,:  ರೋಹಿಂಗ್ಯಾಗಳಿಂದ ಉಗ್ರ ಚಟುವಟಿಕೆ  ಆರೋಪ ಹಿನ್ನೆಲೆ ಬೆಳ್ಳಂಬೆಳಿಗ್ಗೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಎನ್ ಐಎ ದಾಳಿ ನಡೆಸಿ8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನ ವಶಕ್ಕೆ ಪಡೆದಿದೆ.

ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ  15 ಎನ್ ಐಎ ತಂಡಗಳು  ಏಕಕಾಲಕ್ಕೆ ದಾಳಿ ನಡೆಸಿದೆ.  ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ನಡೆಸಿ ಪರಿಶೀಲನೆ ಮಾಡುತ್ತಿದೆ.

8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ 15 ಅಧಿಕಾರಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Related posts

ಯುವ ದಸರಾ: ಸಾವಿರಾರು ಪ್ರೇಕ್ಷಕರನ್ನ ರಂಜಿಸಿದ ಖ್ಯಾತ ಗಾಯಕರು.

ಗ್ಯಾರಂಟಿ’ ಯೋಜನೆಗಳ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಮುಂದಾದ ನೊಬೆಲ್ ಪ್ರಶಸ್ತಿ ಪುರಸ್ಕೃತರು..

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ 64,830 ಅಭ್ಯರ್ಥಿಗಳು ಪಾಸ್