ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ದೀಪಾವಳಿ ಹಬ್ಬ:  ಬೆಂಗಳೂರಿನಲ್ಲಿ ಒಂದೇ ದಿನ ಪಟಾಕಿ ಸಿಡಿಸುವ ವೇಳೆ 26 ಜನರಿಗೆ ಗಾಯ: ಆಸ್ಪತ್ರೆಗೆ ದಾಖಲು

ಬೆಂಗಳೂರು: ನಾಡಿನೆಲ್ಲಡೆ ದೀಪಾವಳಿ ಹಬ್ಬದ ಸಂಭ್ರಮವಾಗಿದ್ದು, ಆದರೆ ಪಟಾಕಿ ಸಿಡಿಸಿ ಗಾಯ ಮಾಡಿಕೊಳ್ಳುವವರ ಸಂಖ್ಯೆ ಹೆ್ಚ್ಚುತ್ತಿದೆ. ಈ ನಡುವೆ  ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು26 ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ನಾಲ್ವರು ಮಕ್ಕಳು ಸೇರಿದಂತೆ 26 ಜನರಿಗೆ ಗಾಯವಾಗಿದ್ದು, ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 22 ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ನಾಲ್ವರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ನಾರಾಯಣ ನೇತ್ರಾಲಯದ 22 ಜನರಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ನಾರಾಯಣ ನೇತ್ರಾಲಯ ಮುಖ್ಯಸ್ಥ ರೋಹಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

Related posts

ದಸರಾ ಹಬ್ಬದ ಸಮೀಪದಲ್ಲಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್.

ಬೆಂಗಳೂರಿನಲ್ಲಿಇಂದಿನಿಂದ  ಕಡಲೆಕಾಯಿ ಪರಿಷೆ..

ಜೋಗಿ ಜಾತಿಯನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಆಗ್ರಹ.