ಕನ್ನಡಿಗರ ಪ್ರಜಾನುಡಿ
ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಏಕದಿನ ವಿಶ್ವಕಪ್ ಸೆಮಿಫೈನಲ್: ಟಾಸ್ ಗೆದ್ದು ಭಾರತ ಬ್ಯಾಟಿಂಗ್ ಆಯ್ಕೆ.

ಮುಂಬೈ:  ಏಕದಿನ ವಿಶ್ವಕಪ್ ​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು  ಟಾಸ್  ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು. ಪಂದ್ಯದಲ್ಲಿ ಗೆಲುವು ಸಾಧಿಸಿದವರು ಫೈನಲ್ ಪ್ರವೇಶಿಸಲಿದ್ದಾರೆ.

ಏಕದಿನ ಕ್ರಿಕೆಟ್​ನಲ್ಲಿ ಉಭಯ ತಂಡಗಳು 117 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ 59 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 50 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯ ಟೈನಲ್ಲಿ ಅಂತ್ಯಕಂಡರೆ, 7 ಮ್ಯಾಚ್​ಗಳು ಫಲಿತಾಂಶರಹಿತವಾಗಿತ್ತು.

ತಂಡಗಳು ಹೀಗಿದೆ

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.

ನ್ಯೂಜಿಲೆಂಡ್ ತಂಡ:

ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲಾಥಮ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

Related posts

ಬಡ ದಲಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ಬಂಧಿಸಿ: ದಸಂಸ ಪ್ರತಿಭಟನೆ.

ವಿಶ್ವ ಅರಿವಳಿಕೆ ದಿನಾಚರಣೆ: ಅರಿವು ಮೂಡಿಸುವ ತುರ್ತು ಚಿಕಿತ್ಸೆಯ ಪ್ರಾತ್ಯಕ್ಷಿಕೆ ಕಾರ್ಯಕ್ರಮ.

ಗ್ಯಾಸ್ ಸಿಲಿಂಡರ್ ಬೆಲೆ ಇಳಿಸಿದ್ದು ಚುನಾವಣೆ ಗಿಮಿಕ್ ಅಲ್ವಾ?: ಕೇಂದ್ರದ ವಿರುದ್ಧ ವ್ಯಂಗ್ಯವಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್.