ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಗಡುವು ವಿಸ್ತರಣೆ.

ಬೆಂಗಳೂರು:  ಕರ್ನಾಟಕ ಸಾರಿಗೆ ಇಲಾಖೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ ಗಡುವನ್ನು  ಮೂರು ತಿಂಗಳಿಗೆ ವಿಸ್ತರಣೆ ಮಾಡಿದೆ.

ಈ ಕುರಿತು ಮಾಹಿತಿ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ,  ನವೆಂಬರ್ 17ಕ್ಕೆ ಅಂತ್ಯವಾಗಬೇಕಿದ್ದ HSRP ನಂಬರ್ ಪ್ಲೇಟ್ ಅವಧಿಯನ್ನು ಇದೀಗ ಫೆಬ್ರವರಿ 17ರವರೆಗೆ ವಿಸ್ತರಣೆ ಮಾಡಿದೆ. 90 ದಿನಗಳ ಕಾಲಾವಕಾಶವನ್ನು ಸರ್ಕಾರ ಕಲ್ಪಿಸಿದ್ದು, ಎಲ್ಲರೂ ಆದಷ್ಟು ಬೇಗ HSRP ನಂಬರ್ ಪ್ಲೇಟ್ ಹಾಕುವಂತೆ ಮನವಿ ಮಾಡಿದ್ದಾರೆ.

2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು 90 ದಿನಗಳಲ್ಲಿ ಎಚ್ ಎಸ್ ಆರ್ ಪಿ ಫಲಕ ಹೊಂದಬೇಕು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕೆಲ ಗೊಂದಲ, ಅವಧಿ ವಿಸ್ತರಣೆ ಬಳಿಕ ನವೆಂಬರ್ 17, 2023 ಕೊನೆಯ ದಿನಾಂಕ ನೀಡಲಾಗಿತ್ತು. ಇದರ ನಡುವೆ ಕೋರ್ಟ್ ನಲ್ಲಿ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಗಡುವು ವಿಸ್ತರಿಸಲು ರಾಜ್ಯಕ್ಕೆ ಸೂಚನೆ ನೀಡಿತ್ತು. ಇದರಂತೆ ಸಾರಿಗೆ ಇಲಾಖೆ 90 ದಿನಗಳಿಗೆ ಮತ್ತೆ ಅವಧಿ ವಿಸ್ತರಣೆ ಮಾಡಿದೆ.

2019ರ ಎಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ 2 ಕೋಟಿ ವಾಹನಗಳ ಪೈಕಿ ಕೇವಲ 2.6 ಲಕ್ಷ ವಾಹನಗಳು ಮಾತ್ರ HSRP ನಂಬರ್ ಪ್ಲೇಟ್ ಹಾಕಲಾಗಿದೆ. ಇನ್ನುಳಿದ ವಾಹನಗಳು ಇನ್ನೂ HSRP ನಂಬರ್ ಪ್ಲೇಟ್ ಹಾಕಿಲ್ಲ. ಇನ್ನು 90 ದಿನಗಳಲ್ಲಿ ಈ ವಾಹನಗಳು HSRP ನಂಬರ್ ಪ್ಲೇಟ್ ಹಾಕಬೇಕಿದೆ.

ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್, ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್(HSRP). ಅತೀ ಸುರಕ್ಷಿತ ನಂಬರ್ ಪ್ಲೇಟ್ ಕರ್ನಾಟಕದಲ್ಲಿನ ವಾಹನಕ್ಕೆ ಕಡ್ಡಾಯ ಮಾಡಲಾಗಿದೆ. ಎಚ್ಎಸ್ಆರ್ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್ಸಿ, ವಿಮೆ ಅಪ್ಡೇಟ್, ಸಾಮರ್ಥ್ಯ ಅನುಮೋದನೆ ಇತ್ಯಾದಿ ಸಾಧ್ಯವಿಲ್ಲ. ಎಚ್ಎಸ್ಆರ್ಪಿ ನಂಬರ್ ಅಳವಡಿಕೆ ಮಾಡಿಕೊಂಡ ಮಾಹಿತಿಯನ್ನು ವಾಹನ್ ತಂತ್ರಾಂಶದಲ್ಲಿ ಮಾಲೀಕರ ಮಾಹಿತಿ ಲಭ್ಯವಾಗುತ್ತದೆ. ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಇದು ಸಹಾಯಕವಾಗಲಿದೆ.

 

Related posts

22 ಬೆಟ್ಟಿಂಗ್ ಆ್ಯಪ್, ವೆಬ್ ಸೈಟ್ ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ.

ಗಮನ ಸೆಳೆದ ಶಾಲಾ ವಿದ್ಯಾರ್ಥಿಗಳ ಅಡುಗೆ ಸ್ಪರ್ಧೆ

ತೀವ್ರಗೊಂಡ ಕಾವೇರಿ ಹೋರಾಟ: ಅಖಂಡ ಕರ್ನಾಟಕ ಬಂದ್: ಬೀದಿಗಳಿದು ಪ್ರತಿಭಟನೆ..