ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನಾಯಿ ಕಡಿತದಿಂದ ಮೃತಪಟ್ಟರೇ 5 ಲಕ್ಷ ರೂ. ಪರಿಹಾರ ನೀಡಿ- ಸರ್ಕಾರಕ್ಕೆ ಹೈಕೋರ್ಟ್ ಸೂಚನೆ.

ಬೆಂಗಳೂರು : ನಾಯಿ ಕಡಿತದಿಂದ ಮೃತಪಟ್ಟರೇ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ನಾಯಿಕಡಿತದಿಂದ ಗಾಯಗೊಂಡವರಿಗೆ 5 ಸಾವಿರ ರೂ. ಮತ್ತು ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ವಕೀಲ ರಮೇಶ್ ಎಲ್ ನಾಯಕ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಭೆ ನಡೆಸಬೇಕು. 4 ವಾರದಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚಿಸಿದೆ.

ಬೀದಿ ನಾಯಿಗಳಿಗೆ ಆಹಾರ ನೀಡಲು ಮಾರ್ಗಸೂಚಿ ಪ್ರಕಟಿಸಲಾಗಿದೆ. ಜನಸಾಮಾನ್ಯರಿಗೆ ಇದರ ತಿಳಿವಳಿಕೆ ನೀಡಲು ಕ್ರಮ ಕೈಗೊಳ್ಳಬೇಕು. ವಾರ್ತಾ, ಪ್ರಚಾರ ಇಲಾಖೆ ವ್ಯಾಪಕ ಪ್ರಚಾರ ನೀಡಬೇಕು ಎಂದು ಹೇಳಿದೆ.

ಈ ವೇಳೆ ಸರ್ಕಾರದ ಪರ ವಕೀಲರು 2023 ಅ.6 ರಂದು ನಡೆದ ಸಭೆಯಲ್ಲಿ ಸಂತ್ರಸ್ತರಿಗೆ ನೀಡುವ ಪರಿಹಾರ ವಿಚಾರವಾಗಿ ಚರ್ಚಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಇದಕ್ಕೆ ನ್ಯಾಯ ಪೀಠ ಸಭೆಯ ನಂತರ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿತು.

ಒಂದು ಬಾರಿ ಬೀದಿ ನಾಯಿ ಕಚ್ಚಿದ್ರೆ 10 ಸಾವಿರ ಪರಿಹಾರ ನೀಡಬೇಕು : ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಹೈಕೋರ್ಟ್ 

ಇನ್ನೊಂದೆಡೆ ಬೀದಿ ನಾಯಿ ದಾಳಿ ಮಾಡಿದ್ದಲ್ಲಿ ಜನರಿಗೆ ಪರಿಹಾರವನ್ನು ಪಾವತಿಸಲು ರಾಜ್ಯವು ಪ್ರಾಥಮಿಕವಾಗಿ ಜವಾಬ್ದಾರವಾಗಿದೆ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪು ನೀಡಿದೆ.

1 ಬಾರಿ ಬೀದಿ ನಾಯಿ ಕಚ್ಚಿದ್ರೆ 10 ಸಾವಿರ ಪರಿಹಾರ ಕೊಡ್ಬೇಕು ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.   ಪ್ರತಿ ಹಲ್ಲಿನ ಗುರುತಿಗೆ ಕನಿಷ್ಠ 10,000 ರೂ. ಮತ್ತು 0.2 ಸೆಂ.ಮೀ ಗಾಯಕ್ಕೆ ಕನಿಷ್ಠ 20,000 ರೂ. ಪರಿಹಾರ ಧನ ನೀಡಬೇಕೆಂದು ಹೇಳಿದೆ.

193 ಅರ್ಜಿಗಳನ್ನು ವಿಲೇವಾರಿ ಮಾಡಿದ ಹೈಕೋರ್ಟ್, ಅಂತಹ ಪರಿಹಾರವನ್ನು ನಿರ್ಧರಿಸಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಗಳನ್ನು ರಚಿಸುವಂತೆ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಗಢಕ್ಕೆ ಆದೇಶಿಸಿದೆ.

ನಾಯಿ ಕಡಿತದಿಂದ ಮೃತಪಟ್ಟರೇ 5 ಲಕ್ಷ ರೂ. ಪರಿಹಾರ ನೀಡಿ- ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು ನ.15: ನಾಯಿ ಕಡಿತದಿಂದ ಮೃತಪಟ್ಟರೇ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ನಾಯಿಕಡಿತದಿಂದ ಗಾಯಗೊಂಡವರಿಗೆ 5 ಸಾವಿರ ರೂ. ಮತ್ತು ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ವಕೀಲ ರಮೇಶ್ ಎಲ್ ನಾಯಕ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಭೆ ನಡೆಸಬೇಕು. 4 ವಾರದಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚಿಸಿದೆ.
ಬೀದಿ ನಾಯಿಗಳಿಗೆ ಆಹಾರ ನೀಡಲು ಮಾರ್ಗಸೂಚಿ ಪ್ರಕಟಿಸಲಾಗಿದೆ. ಜನಸಾಮಾನ್ಯರಿಗೆ ಇದರ ತಿಳಿವಳಿಕೆ ನೀಡಲು ಕ್ರಮ ಕೈಗೊಳ್ಳಬೇಕು. ವಾರ್ತಾ, ಪ್ರಚಾರ ಇಲಾಖೆ ವ್ಯಾಪಕ ಪ್ರಚಾರ ನೀಡಬೇಕು ಎಂದು ಹೇಳಿದೆ.
ಈ ವೇಳೆ ಸರ್ಕಾರದ ಪರ ವಕೀಲರು 2023 ಅ.6 ರಂದು ನಡೆದ ಸಭೆಯಲ್ಲಿ ಸಂತ್ರಸ್ತರಿಗೆ ನೀಡುವ ಪರಿಹಾರ ವಿಚಾರವಾಗಿ ಚರ್ಚಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಇದಕ್ಕೆ ನ್ಯಾಯ ಪೀಠ ಸಭೆಯ ನಂತರ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿತು.

Related posts

ಕಾವೇರಿ  ನದಿ ನೀರು ವಿವಾದ:  ಸೆ.21ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ  ಎರಡು ದಿನ ಜಿ20  ಶೃಂಗಸಭೆ: ವಿಶ್ವ ಅಗ್ರ ರಾಷ್ಟ್ರಗಳ ನಾಯಕರು ಭಾಗಿ.

ನಗರ ದೇವಾಂಗ ಸಮಾಜದ ಅಧ್ಯಕ್ಷರಾಗಿ ಬಿ.ಸತೀಶ ಕುಮಾರ್