ಹೈದರಾಬಾದ್: ಬಿಜೆಪಿಯವರು ಮುಸ್ಲೀಂರನ್ನ ದ್ವೇಷಿಸುತ್ತಿದ್ದರು. ಈಗ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುವಂತಾಗಿದೆ. ಹೀಗೆ ಮಾಡಿದ್ದು ಕಾಂಗ್ರೆಸ್ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ತೆಲಂಗಾಣದಲ್ಲಿ ಅಬ್ಬರದ ಭಾಷಣ ಮಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ಕರ್ನಾಟಕದಲ್ಲಿ ಕಾಂಗ್ರೆಸ್ನಿಂದ 9 ಮುಸ್ಲಿಮರು ಗೆದ್ದಿದ್ದಾರೆ. 9 ಮುಸ್ಲಿಂ ಶಾಸಕರ ಪೈಕಿ 5 ಶಾಸಕರಿಗೆ ಅಧಿಕಾರ ನೀಡಿದೆ. ನನ್ನನ್ನು ಸಚಿವನಾಗಿ ಮಾಡಿದೆ. ಅಲ್ಲದೇ ರಹೀಂ ಖಾನ್ ಸಹ ಮಂತ್ರಿ ಆಗಿದ್ದಾರೆ. ಸಲೀಂ ಅಹಮದ್ ಅವರನ್ನು ಮುಖ್ಯ ಸಚೇತಕರಾಗಿ ಮಾಡಲಾಗಿದೆ. ನಜೀರ್ ಅಹಮದ್ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ.
ಇನ್ನು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಯಾವ ಮುಸ್ಲಿಂ ಸ್ಪೀಕರ್ ಆಗಿರಲಿಲ್ಲ. ಯು.ಟಿ.ಖಾದರ್ ಅವರನ್ನು ವಿಧಾನಸಭಾ ಸ್ಪೀಕರ್ ಆಗಿ ನೇಮಿಸಲಾಗಿದೆ. ಈಗ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ. ಹೀಗೆ ಮಾಡಿದ್ದು ಕಾಂಗ್ರೆಸ್ ಎಂದು ಜಮೀರ್ ಹೇಳಿದ್ದಾರೆ.