ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಹೆಚ್. ಕಾಂತರಾಜ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ.

ಶಿವಮೊಗ್ಗ: ಹೆಚ್. ಕಾಂತರಾಜ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟ, ಹಿಂದುಳಿತ ಜನಜಾಗೃತಿ ವೇದಿಕೆ ಹಾಗೂ ಜಿಲ್ಲಾ ಹಿಂದುಳಿದ ಮತ್ತು ಅತಿ ಹಿಂದುಳಿದ ಜನಜಾಗೃತಿ ವೇದಿಕೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಿ ಹಕ್ಕೊತ್ತಾಯ ಮಂಡಿಸಲಾಯಿತು.
ರಾಜ್ಯ ಸರ್ಕಾರ 2014-15ರಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಸುಮಾರು 180 ಕೋಟಿ ರೂ. ವೆಚ್ಚ ಮಾಡಿ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ಎಲ್ಲಾ ಜಾತಿಗಳ ಹಿಂದುಳಿದವರ ಸಮಗ್ರ ವರದಿಯನ್ನು ಸಿದ್ಧಪಡಿಸಿದೆ. ಆದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಶಾಶ್ವತ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಸದರೀ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲು ಮೀನಾಮೇಷ ಎಣಿಸುತ್ತಿದ್ದಾರೆ. ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿ, ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ-ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂಗೀಕರಿಸಿ ಅನುಷ್ಠಾನಕ್ಕೆ ತರಬೇಕೆಂದು ಆಗ್ರಹಿಸಿದರು.
ನಮ್ಮದು ನ್ಯಾಯಬದ್ಧ ಹೋರಾಟವಾಗಿದೆ. ಬಿಹಾರ ರಾಜ್ಯ ಸರ್ಕಾರ ಈಗಾಗಲೇ ವರದಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡುವುದಾಗಿ ಪದೇ ಪದೇ ಹೇಳುತ್ತಲೇ ಬಂದಿದ್ದಾರೆ ಆದರೂ ಬಿಡುಗಡೆ ಮಾಡುತ್ತಿಲ್ಲ. ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರುವ ಅವರು ಕೂಡಲೇ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಹೆಚ್. ಕಾಂತರಾಜ್ ಆಯೋಗದ ವರದಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂದಿದ್ದರೂ ಸದರಿ ಸಮೀಕ್ಷೆಯಲ್ಲಿ ಜಾತಿ ವಿವರಗಳು, ಸಾಮಾಜಿ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ಕಲೆಹಾಕಲಾಗಿದೆ ಎಂದು ತಿಳಿದುಬಂದಿದ್ದು, ಇದರಿಂದಾಗಿ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ನೀಡಲಾಗಿರುವ ಇಂತಹ ಮಾಹಿತಿಗಳಿಂದ ಶೋಷಣೆಗೊಳಗಾಗಿರುವ ಹಿಂದುಳಿದ ಜಾತಿ, ವರ್ಗಗಳಿಗೆ ನಿಜವಾಗಿಯೂ ಸಾಮಾಜಿ ನ್ಯಾಯ ದೊರೆಯುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದು ಹಿಂದುಳಿದ ಜನಜಾಗೃತ ವೇದಿಕೆ ಅಧ್ಯಕ್ಷ ತೀ.ನ. ಶ್ರೀನಿವಾಸ್ ಹೇಳಿದರು.
ಹಿಂದುಳಿದ ಜಾತಿ-ವರ್ಗಗಳಿಗೆ ಸಂಜೀವಿನಿಯಾಗಿರುವ ಕಾಂತರಾಜ್ ಆಯೋಗದ ವರದಿಯನ್ನು ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರುವ ಮುಖ್ಯಮಂತ್ರಿಗಳು ಶೀಘ್ರವೇ ಸ್ವೀಕರಿಸಿ ಅನುಷ್ಠಾನಗೊಳಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಧರಣಿ ಸತ್ಯಾಗ್ರಹದಲ್ಲಿ ಒಕ್ಕೂಟದ ಮುಖ್ಯಸ್ಥರಾದ ವಿ. ರಾಜು, ಆರ್.ಕೆ. ಸಿದ್ದರಾಮಣ್ಣ, ಪ್ರೊ. ಹೆಚ್. ರಾಚಪ್ಪ, ಪ್ರಮುಖರಾದ ಆರ್.ಟಿ. ನಟರಾಜ್, ಜನಮೇಜಿರಾವ್, ಹೆಚ್.ಎಂ. ರಂಗನಾಥ, ಎಸ್.ಪಿ. ಅಶೋಕ್‍ಕುಮಾರ್, ಪ್ರೊ. ಡಿ.ಆರ್. ಉಮೇಶ್ ಪ್ರೊ. ಹೆಚ್. ಕಲ್ಲನ, ಎಸ್.ವಿ.ರಾಜಮ್ಮ, ಮೋಹನ್, ಗಣೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Related posts

ಕಾವೇರಿ ನೀರಿಗಾಗಿ ಹೋರಾಡುತ್ತಿರುವವರು ಮೇಕೆದಾಟು ಯೋಜನೆ ಅನುಮತಿಗೆ ಯಾಕೆ ಒತ್ತಾಯಿಸುತ್ತಿಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ಅ.16 ಮತ್ತು 17ರಂದು ದಸರಾ ಚಲನಚಿತ್ರೋತ್ಸವ-ಸುವರ್ಣಾ ಶಂಕರ್

ಕುಡಿತದಿಂದ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಬೆಳೆಯುತ್ತಿದ್ದರೂ ಜನಪ್ರತಿನಿಧಿಗಳು ಗಮನಿಸದಿರುವುದು ವಿಷಾದನೀಯ-ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ