ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಾತಿ ಜನಗಣತಿ ಮೂಲ ಪ್ರತಿ ನಾಪತ್ತೆಯಾಗಿದೆ ಎಂಬುದು ಸುಳ್ಳು- ಗೃಹ ಸಚಿವ ಡಾ. ಜಿ.ಪರಮೇಶ್ವರ್.

ಬೆಂಗಳೂರು:   ಜಾತಿ ಜನಗಣತಿ ಮೂಲ ಪ್ರತಿ ನಾಪತ್ತೆಯಾಗಿದೆ ಎಂಬುದು ಸುಳ್ಳು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ವರದಿ ಇನ್ನೂ ಸಲ್ಲಿಕೆಯಾಗಿಲ್ಲ. ಆಯೋಗದವರು ವರದಿಯನ್ನ ಸರ್ಕಾರಕ್ಕೆ ಕೊಟ್ಟ ನಂತರ ಸರ್ಕಾರ ಅದನ್ನ ತೀರ್ಮಾನ ಮಾಡುತ್ತದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಒಂದು ತಿಂಗಳು ಹೆಚ್ಚಿಗೆ ಕಾಲಾವಕಾಶ ನೀಡಲಾಗಿದೆ.  ವರದಿ ಹೊರಗೆ ಬಂದ ನಂತರ ಪರ ವಿರೋಧ ಅಭಿಪ್ರಾಯಗಳು ಕೇಳಿಬರಬಹದು. ಏನೂ ಇಲ್ಲದೇನೆ ಹೀಗೆ ಚರ್ಚೆ ನಡೆಸೋದು ಎಷ್ಟರ ಮಟ್ಟಿಗೆ ಸರಿ.

ವಿರೋಧ ಪಕ್ಷವರು ಕೂಡ ಏನೇನೋ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ವರದಿ ಬಂದ ಮೇಲೆ ತಾನೇ ಅದೆಲ್ಲ ಮಾತನಾಡೋದು  ಎಂದು ಪರಮೇಶ್ವರ್ ಪ್ರತಿಕ್ರಿಯಿಸಿದರು.

Related posts

ಜಾನುವಾರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆ ಹಾಕಿಸಿ – ಡಿಸಿ ಸೂಚನೆ

 ವಿಧಾನಸೌಧ ಮುತ್ತಿಗೆಗೆ ಕರ್ನಾಟಕ ರಕ್ಷಣಾ ವೇದಿಕೆ  ಕಾರ್ಯಕರ್ತರು ಯತ್ನ.

ಡಿಜಿಟಲ್ ಮಾರುಕಟ್ಟೆಯು ಪ್ರಸ್ತುತ ಅನಿವಾರ್ಯ-ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ