ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್:

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ  ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲೊಂದಾದ  ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ.

ಯೋಜನೆಯಡಿಯಲ್ಲಿ 5 ಕೆಜಿ ಅಕ್ಕಿ ಜೊತೆಗೆ ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಈಗ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಯಜಮಾನರು ಇಲ್ಲದೇ ಇದರೂ, 2ನೇ ವ್ಯಕ್ತಿ ಖಾತೆಗೆ ಹಣ ಜಮಾ ಮಾಡಲು ಸರ್ಕಾರ ಚಿಂತನೆ ನಡೆಸಿದೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಸಂಬಂಧಿಸಿದ ಇಲಾಖೆಗಳ ಸಭೆಯ ನಡೆಸಿದರು.

ಸಭೆಯ ಬಳಿಕ ಮಾತನಾಡಿದಂತ ಸಿಎಂ ಸಿದ್ದರಾಮಯ್ಯ ಅವರು, ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ ಎಂದರು.

12.95 ಲಕ್ಷ ಚೀಟಿದಾರರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ ಎಂದು ತಿಳಿಸಿದರು.

7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಿದರು. ಡಿಸೆಂಬರ್ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

 

Related posts

ಭಾರತ, ಇಂಡಿಯಾ ಎಂದು ಭಾವನಾತ್ಮಕ ವಿಷಯದಲ್ಲಿ ಆಟ ಆಡಿದ್ರೆ ಬಿಜೆಪಿಗೆ ಜನರೇ ತಕ್ಕ ಶಿಕ್ಷೆ ನೀಡುತ್ತಾರೆ-ಸಚಿವ ಮಧು ಬಂಗಾರಪ್ಪ

ರಾಗಿಗುಡ್ಡ ಘಟನೆ ಬಗ್ಗೆ ಸತ್ಯಾಂಶ ತಿಳಿಸಿ, ಶಾಂತಿ ಕಾಪಾಡಬೇಕು- ಎಸ್ಪಿ ಮಿಥುನ್ ಕುಮಾರ್ ಗೆ ಕಾಂಗ್ರೆಸ್ ಮುಖಂಡರ ಮನವಿ.

ಎಲ್ಲ ಸದಸ್ಯರ ಸಹಕಾರಿಂದ ಸಂಘಟನೆ ಸದೃಢ-ಎನ್.ಗೋಪಿನಾಥ್