ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಐಟಿ ಮತ್ತು ಇಡಿ ಮೂಲಕ  ವಿಪಕ್ಷ ಮುಗಿಸಲು ಬಿಜೆಪಿ ಸಂಚು-ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು:  ಐಟಿ ಮತ್ತು ಇಡಿ ಮೂಲಕ ವಿಪಕ್ಷಗಳ ನಾಯಕರ ವಿರುದ್ಧ ಕೇಂದ್ರ ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ಕೇಂದ್ರದಲ್ಲಿ ಬಿಜೆಪಿ ವಿಪಕ್ಷವನ್ನ ಮುಗಿಸಲು ಸಂಚು ಮಾಡುತ್ತಿದೆ. ವಿಪಕ್ಷದವರ ಧ್ವನಿ ಕಟ್ಟಿಹಾಕಲು ಕೆಲವರನ್ನು ಐಟಿ ಮತ್ತು ಇಡಿ ಮೂಲಕ ಹೆದರಿಸುತ್ತಿದೆ. ಎಐಸಿಸಿ ಅಧ್ಯಕ್ಷರಿಂದ ಹಿಡಿದು ಕೆಪಿಸಿಸಿ ಅಧ್ಯಕ್ಷರ ತನಕವೂ ನಾಯಕರ ವಿರುದ್ದ ಸಂಚು ರೂಪಿಸುತ್ತಿದೆ ಎಂದು ಆರೋಪಿಸಿದರು.

ಅಂತೆಯೇ ಡಿಸಿಎಂ ಡಿಕೆ ಶಿವಕುಮಾರ್​ ಅವರ ವಿರುದ್ದ  ಹಿಂದಿನ ಬಿಜೆಪಿ ಸರ್ಕಾರ ಪ್ರಾಮಾಣಿಕವಾಗಿ ಸಂಚು ರೂಪಿಸುವ ಕೆಲಸ ಮಾಡಿತ್ತು. ಕೊಲೆ ಮಾಡಿದರೂ ಪರವಾಗಿಲ್ಲ ಅಂತವರಿಗೆ ಏನೂ ಆಗಿಲ್ಲ. ಆದರೆ ನಮ್ಮನ್ನು ಮಾತ್ರ ಹೆದರಿಸುತ್ತಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಕಿಡಿಕಾರಿದರು.

Related posts

ಮೈಸೂರು ದಸರಾ ಮಹೋತ್ಸವ:  ಗಜಪಯಣಕ್ಕೆ ವಿದ್ಯುಕ್ತ ಚಾಲನೆ.

ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಐತಿಹಾಸಿಕ ತೀರ್ಮಾನ-ಸಂಸದ ಬಿ.ವೈ. ರಾಘವೇಂದ್ರ

ಹಿಂದೂ ಮಹಾಸಭಾ ಗಣಪತಿ ದರ್ಶನ ಪಡೆದ ಸಚಿವ ಮಧು ಬಂಗಾರಪ್ಪ: ಶಾಸಕ ಎಸ್.ಎನ್. ಚನ್ನಬಸಪ್ಪ ಉಪಸ್ಥಿತಿ