ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕರಾಳ ದಿನ: ಮುಂಬೈ 26 \11 ಭಯೋತ್ಪಾದಕ ದಾಳಿಗೆ ಹದಿನೈದು ವರ್ಷ…..

ಬೆಂಗಳೂರು: ಮುಂಬೈನಲ್ಲಿ ನಡೆದ 26‌‌ ‌‌\11 ಭಯೋತ್ಪಾದಕ ದಾಳಿಗೆ ಹದಿನೈದು ವರ್ಷ ತುಂಬಿದೆ.ಹೌದು. ಹದಿನೈದು ವರ್ಷಗಳ ಹಿಂದೆ ಈ ದಿನ (26‌‌ ‌‌\11) ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಗೆ 166 ಜನ ಮೃತಪಟ್ಟಿದ್ದರು.10 ಭಯೋತ್ಪಾದಕರ ಗುಂಪಿನ ಈ ಸಂಘಟಿತ ದಾಳಿ ಭಾರತ ಮಾತ್ರವಲ್ಲದೆ ಜಗತ್ತಿನೆಲ್ಲೆಡೆ ಸಂಚಲನ ಮೂಡಿಸಿತ್ತು. ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಗುಂಪಿನ ಭಯೋತ್ಪಾದಕರು 2008ರ ನವೆಂಬರ್ 26ರಂದು ರಾತ್ರಿ ಮುಂಬೈ ಪ್ರವೇಶಿಸಿದ್ದರು.ಏಕಾಏಕಿ ನಡೆಸಿದ ಗುಂಡಿನಲ್ಲಿ ದಾಳಿಯಲ್ಲಿ ನಾಲ್ಕು ದಿನಗಳ ಅವಧಿಯಲ್ಲಿ 166 ಜನರು ಮೃತಪಟ್ಟು 300 ಜನರು ಗಾಯಗೊಂಡಿದ್ದರು.ತಾಜ್ ಮತ್ತು ಒಬೆರಾಯ್ ಹೊಟೇಲ್‌ಗಳು, ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್‌, ನಾರಿಮನ್ ಹೌಸ್‌’ನ ಐಷಾರಾಮಿ ಮಡಿಲಲ್ಲಿ ದುಃಸ್ವಪ್ನವಾದ ದಾಳಿಗೆ ನೂರಾರು ಅಮಾಯಕ ಜೀವಗಳು ಪ್ರಾಣ ಕಳೆದುಕೊಂಡಿದ್ದವು.ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದ 10 ಭಯೋತ್ಪಾದಕರ ಪೈಕಿ 9 ಮಂದಿ ಛತ್ರಪತಿ ಶಿವಾಜಿ ಟರ್ಮಿನಲ್ ರೈಲ್ವೇ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿದ್ದರು. ಮತ್ತೊಬ್ಬ ‘ಮೊಹಮ್ಮದ್ ಅಜ್ಮಲ್ ಅಮೀರ್ ಕಸಬ್‌’ಗೆ 2010ರಲ್ಲಿ ಮರಣದಂಡನೆ ವಿಧಿಸಿ, 2012ರಲ್ಲಿ ಪುಣೆಯಲ್ಲಿ ಗಲ್ಲಿಗೇರಿಸಲಾಯಿತು.

26/11 ದಾಳಿ ಹುತಾತ್ಮರನ್ನು ಸ್ಮರಿಸಿದ ಪ್ರಧಾನಿ ಮೋದಿ…   

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 107 ನೇ ಸಂಚಿಕೆಯಲ್ಲಿ 26/11 ದಾಳಿಯಲ್ಲಿ ಹುತಾತ್ಮರಾದವರನ್ನು ಸ್ಮರಿಸಿದ್ದಾರೆ.ನವೆಂಬರ್ 26 ಅನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶವು ಅತ್ಯಂತ ಭೀಕರ ಭಯೋತ್ಪಾದಕ ದಾಳಿಗೆ ಒಳಗಾಯಿತು ಎಂದು ಮೋದಿ ಹೇಳಿದ್ದಾರೆ.ಜತೆಗೆ ನವೆಂಬರ್ 26 ಮತ್ತೊಂದು ಕಾರಣಕ್ಕಾಗಿ ಅತ್ಯಂತ ಮಹತ್ವದ್ದಾಗಿದೆ. 1949 ರಲ್ಲಿ ಇದೇ ದಿನ ಸಂವಿಧಾನ ರಚನಾ ಸಭೆ ಭಾರತದ ಸಂವಿಧಾನವನ್ನು ಅಂಗೀಕರಿಸಿತು ಎಂದು ಪ್ರಧಾನಿ ಸ್ಮರಿಸಿದ್ದಾರೆ.

 

Related posts

ಮೆಟ್ರೋ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ.

ಶಿಶುಪಾಲನಾ ಕೇಂದ್ರ ಮುಚ್ಚಲು ಹೊರಟಿರುವುದಕ್ಕೆ ಖಂಡನೆ: ಜಿಲ್ಲಾಧಿಕಾರಿಗೆ ಮನವಿ.

ಬಿಗ್’ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಅರೆಸ್ಟ್…