ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ.

ಬೆಂಗಳೂರು:  ರಾಜ್ಯ ರಾಜಧಾನಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕನೊಬ್ಬ ಇ-ಮೇಲ್ ಕಳಿಸಿದ್ದಾನೆ. ಬಾಂಬ್ ಬೆದರಿಕೆಯ ಹಿನ್ನೆಲೆ  ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಇನ್ನು ಆತಂಕಗೊಂಡ ಪೋಷಕರು ಶಾಲೆ ಬಳಿ ಓಡೋಡಿ ಬಂದು ತಮ್ಮ-ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.

ಬಾಂಬ್ ಬೆದರಿಕೆ ಇ-ಮೇಲ್ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೆದರಿಕೆ ಬಂದಿರುವ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Related posts

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರಿಗೆ ‘Z’ ಶ್ರೇಣಿ ಭದ್ರತೆ.

ಒಂಬತ್ತು ವರ್ಷಗಳ ಹಿಂದಿನ ಕಿಡ್ನಾಪ್ ಪ್ರಕರಣದ ಆರೋಪಿ ಬಂಧನ

TOD News

ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ಮುಚ್ಚಿದೆ –ಡಿಸಿಎಂ ಡಿ.ಕೆ ಶಿವಕುಮಾರ್