ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಬಾಂಬ್ ಬೆದರಿಕೆ ಕರೆ: ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿಎಂ ಡಿ.ಕೆ ಶಿವಕುಮಾರ್.

 

ಬೆಂಗಳೂರು: ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ವಿಚಾರ ಸಂಬಂಧ,  ಯಾರೂ ಕೂಡ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು  ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಇಮೇಲ್ ಮೂಲಕ 15ಕ್ಕೆ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಿನ್ನೆಲೆ ಸದಾಶಿವನಗರದಲ್ಲಿರುವ ನೀವ್ ಅಕಾಡಮಿ ಶಾಲೆಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಆಡಳಿತ ಮಂಡಳಿಯಿಂದ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಅವರು, ವಿಚಾರ ತಿಳದ ನಾನೇ ಗಾಬರಿಗೊಂಡು  ಶಾಲೆಗೆ ಭೇಟಿ ನೀಡಿದ್ದೇನೆ. ಮಾಧ್ಯಮಗಳಲ್ಲಿ ಸುದ್ದಿ ನೋಡಿ ಶಾಲೆಗಳಿಗೆ ಭೇಟಿ ನೀಡಿರುವೆ. ನನ್ನ ಮನೆ ಬಳಿಯೇ ಇರುವ ಶಾಲೆಯಲ್ಲಿ ಪೊಲೀಸರು ಪರಿಶೋಧಿಸುತ್ತಿದ್ದಾರೆ. ಯಾರೂ ಕೂಡ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Related posts

ಸೌತ್ ಜೋನ್ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಸ್ನೇಹ ಎಸ್ ಗೆ ಬೆಳ್ಳಿ ಪದಕ “

ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ- ಕ್ಲೀನ್ ಚಿಟ್ ನೀಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ಮೊದಲ ಹಂತದ ಬೆಳೆ ಸಮೀಕ್ಷೆ:  62 ತಾಲೂಕುಗಳು ಬರ ಪಟ್ಟಿಗೆ ಸೇರ್ಪಡೆ- ಸಚಿವ ಕೃಷ್ಣಬೈರೇಗೌಡ.