ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ನಿಯಮ ಪಾಲಿಸದ, ವೈದ್ಯಕೀಯ ಅನುಮತಿ ಪಡೆಯದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ -ಮೈಸೂರು ಡಿಹೆಚ್​ಓ

ಮೈಸೂರು, ಡಿ.22: ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಅಧಿಕಾರಿಗಳ ತನಿಖೆ ಮುಂದುವರೆದಿದೆ. ನಿಯಮ ಪಾಲಿಸದ, ವೈದ್ಯಕೀಯ ಅನುಮತಿ ಪಡೆಯದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಹೆಚ್‌ಓ ಡಾ. ಪಿ.ಸಿ. ಕುಮಾರಸ್ವಾಮಿ  ಅವರು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ 20ಕ್ಕೂ ಹೆಚ್ಚು ಕ್ಲಿನಿಕ್‌, ನರ್ಸಿಂಗ್ ಹೋಮ್‌ಗೆ ಬೀಗ ಹಾಕಲಾಗಿದೆ. 20ಕ್ಕೂ‌ ಹೆಚ್ಚು ಸ್ಕ್ಯಾನಿಂಗ್ ಯಂತ್ರಗಳನ್ನು ಸೀಲ್ ಮಾಡಲಾಗಿದೆ. ಇನ್ನು 2 ರಿಂದ 3 ತಿಂಗಳು ನಿರಂತರ ಕಾರ್ಯಾಚರಣೆ ನಡೆಸಲಾಗುತ್ತೆ ಎಂದು ಡಿಹೆಚ್‌ಓ ಕುಮಾರಸ್ವಾಮಿ ತಿಳಿಸಿದರು.

ಕೆಪಿಎಂಇ ಪ್ರಮಾಣ ಪತ್ರ ಪಡೆಯದ ನಿಯಮ ಪಾಲಿಸದಿದ್ದರೆ ಕ್ರಮ ಕೈಗೊಳ್ಳಲಾಗುತ್ತೆ. ಸ್ಕ್ಯಾನಿಂಗ್ ಸೆಂಟರ್‌ಗಳು ನಿಯಮ ಪಾಲಿಸಬೇಕು. ಸ್ಕ್ಯಾನಿಂಗ್ ಮಾಡಿರುವ ಸಂಪೂರ್ಣ ವಿವರ ನೀಡಬೇಕು. 5 ಟಾಸ್ಕ್ ಪೋರ್ಸ್ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಅಕ್ರಮದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡುತ್ತಿದ್ದಾರೆ. ಅವರ ವಿವರ ಗೌಪ್ಯವಾಗಿ ಇಡಲಾಗುತ್ತಿದೆ. ನಿಖರ ಮಾಹಿತಿ ನೀಡಿದವರಿಗೆ 50 ಸಾವಿರ ಬಹುಮಾನ ಘೋಷಣೆ ಮಾಡಲಾಗಿದೆ. ಅದನ್ನು ಒಂದು ಲಕ್ಷಕ್ಕೆ ಹೆಚ್ಚಿಸುವ ಪ್ರಸ್ತಾವನೆ ಸಹ ಇದೆ ಎಂದು ಡಾ. ಪಿ.ಸಿ. ಕುಮಾರಸ್ವಾಮಿ ಹೇಳಿದರು.

ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಅಧಿಕಾರಿಗಳು ಕ್ಲಿನಿಕ್, ಸ್ಕ್ಯಾನಿಂಗ್ ಸೆಂಟರ್​ಗಳ ಮೇಲೆ ದಾಳಿ ಮಾಡಿ ಮಾಹಿತಿ ಕಲೆ ಹಾಕುತ್ತಿದ್ದು 20ಕ್ಕೂ ಹೆಚ್ಚು ಕ್ಲಿನಿಕ್‌, ನರ್ಸಿಂಗ್ ಹೋಮ್‌ಗೆ ಬೀಗ ಹಾಕಿದ್ದಾರೆ.

ಅರಮನೆ ಮೃಗಾಲಯದ‌ ಬಳಿ ವಿಶೇಷ ತಂಡ ನಿಯೋಜನೆ

ಇನ್ನು ಮತ್ತೊಂದೆಡೆ ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆ ಮೈಸೂರಿನ ಪ್ರವಾಸಿ ತಾಣಗಳ ಬಳಿ ವಿಶೇಷ ತಂಡ ನಿಯೋಜಿಸಿ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಮಾತನಾಡಿದ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಿ.ಸಿ. ಕುಮಾರಸ್ವಾಮಿ, ಅರಮನೆ ಮೃಗಾಲಯದ‌ ಬಳಿ ವಿಶೇಷ ತಂಡ ನಿಯೋಜನೆ ಮಾಡಲಾಗಿದೆ. ವಿಶೇಷ ತಂಡದಿಂದ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪ್ರವಾಸಿ ತಾಣಗಳಿಗೆ ಆಗಮಿಸುವವರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಸದ್ಯ ಪ್ರವಾಸಿ ತಾಣಗಳಲ್ಲಿ ಟೆಸ್ಟಿಂಗ್ ಅವಶ್ಯಕತೆ ಕಾಣುತ್ತಿಲ್ಲ. ಪ್ರವಾಸಿ ತಾಣಗಳ ಮುಖ್ಯಸ್ಥರ ಸಭೆ ನಡೆಸಲಾಗುವುದು. ಅವರಿಗೂ ಕೊರೊನಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

Related posts

ಆಕಾಶವಾಣಿ ಭದ್ರಾವತಿಯಲ್ಲಿ ಸುವರ್ಣ ಕರ್ನಾಟಕ ಸಂಭ್ರಮ.

ಸಾಮಾನ್ಯ ವರ್ಗದಲ್ಲಿ ಹುದ್ದೆಗಳಿಗೆ ಆಯ್ಕೆಯಾದವರಿಗೆ ಸಿಂಧುತ್ವ ಪ್ರಮಾಣ ಪತ್ರ ಕಡ್ಡಾಯವಿಲ್ಲ.

ಬದುಕಿಗಾಗಿ ಕಲಿಯಲು ಪ್ರಯತ್ನಿಸಿ : ಜಿ.ಎಸ್.ನಾರಾಯಣರಾವ್