ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮಂಡ್ಯಮುಖ್ಯಾಂಶಗಳುರಾಜಕೀಯ

ಮಂಡ್ಯ ಬಿಜೆಪಿ ಟಿಕೆಟ್‌ ಸಿಗದಿದ್ರೆ ಪಕ್ಷೇತರ ಸ್ಪರ್ಧೆ: ಸುಮಲತಾ ಅಂಬರೀಷ್‌

ಮದ್ದೂರು(ಡಿ.24):  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಮಂಡ್ಯದಿಂದ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸಂಸದೆ ಸುಮಲತಾ ಅಂಬರೀಷ್‌ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಮಾತನಾಡಿದ ಅವರು, ಮಂಡ್ಯ ನನ್ನ ಕರ್ಮಭೂಮಿ, ಈ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧೆ ಮಾಡುವುದು ನನ್ನ ಬಯಕೆ ಎಂದರು.

ನನ್ನ ಸ್ಪರ್ಧೆ ಸಂಬಂಧ ಹರಡಿರುವ ವದಂತಿಗಳಿಗೆ ಬೆಂಬಲಿಗರೂ ಸೇರಿ ಯಾರೂ ಕಿವಿಗೊಡಬಾರದು. ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆನ್ನುವುದು ನನ್ನ ಬಯಕೆ. ಈ ಬಗ್ಗೆ ಮಾರ್ಚ್ ನಂತರ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.

ಮಂಡ್ಯದಲ್ಲಿ ನನ್ನ ಪತಿ ಅಂಬರೀಷ್‌ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಾಕಷ್ಟು ಜನಪ್ರಿಯ ಕೆಲಸಗಳನ್ನು ಮಾಡಿ ಜನಮೆಚ್ಚುಗೆ ಪಡೆದುಕೊಂಡಿದ್ದಾರೆ. ಬಿಜೆಪಿಗೆ ಬೆಂಬಲ ನೀಡಿದ್ದೇನೆಯೇ ಹೊರತು ಪಕ್ಷದ ತೀರ್ಮಾನಗಳಲ್ಲಿ ಭಾಗಿಯಾಗಿಲ್ಲ. ನಾನಿನ್ನೂ ಸ್ವತಂತ್ರ ಲೋಕಸಭಾ ಸದಸ್ಯೆ. ನಂತರದ ದಿನಗಳಲ್ಲಿ ನನ್ನ ಸ್ಪಷ್ಟ ನಿರ್ಧಾರ ಪ್ರಕಟಿಸುತ್ತೇನೆ ಎಂದರು.

ಮಂಡ್ಯದಿಂದಲೇ ಸ್ಪರ್ಧೆ ಮಾಡುವುದು ನನ್ನ ಆಸೆ

ನನ್ನ ಸ್ಪರ್ಧೆ ಸಂಬಂಧ ಹರಡಿರುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆನ್ನುವುದು ನನ್ನ ಬಯಕೆ. ಬಿಜೆಪಿಗೆ ಬೆಂಬಲ ನೀಡಿದ್ದೇನೆಯೇ ಹೊರತು ಪಕ್ಷದ ತೀರ್ಮಾನಗಳಲ್ಲಿ ಭಾಗಿಯಾಗಿಲ್ಲ. ನಾನಿನ್ನೂ ಸ್ವತಂತ್ರ ಲೋಕಸಭಾ ಸದಸ್ಯೆ ಎಂದು ಮಂಡ್ಯ ಸಂಸದೆ ಸುಮಲತಾ ತಿಳಿಸಿದ್ದಾರೆ.

Related posts

ಹಿರಿಯ ವಿದ್ಯಾರ್ಥಿಗಳೇ ವಿದ್ಯಾಸಂಸ್ಥೆಯ ನಿಜವಾದ ರಾಯಭಾರಿಗಳು- ಜಿ.ಎಸ್.ನಾರಾಯಣರಾವ್

ರಾಜ್ಯದ ಲೀಗಲ್ ಟೀಂ ಸರಿಯಾಗಿ ವಾದ ಮಾಡಿಲ್ಲ- ಮಾಜಿ ಸಿಎಂ ಬೊಮ್ಮಾಯಿ.

ಕರ್ನಾಟಕದ ಈ ವಿವಿ ಸೇರಿ ದೇಶದ ಒಟ್ಟು 20 ಯುನಿವರ್ಸಿಟಿಗಳು ನಕಲಿ..!