ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಡಿಕೆ ಶಿವಕುಮಾರ್ ಸಮ್ಮುಖದಲ್ಲಿ  ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ.

ಬೆಂಗಳೂರು: ಲೋಕಸಭಾ ಚುನಾವಣೆಗೆ ಜೆಡಿಎಸ್​ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು , ಕಾಂಗ್ರೆಸ್​​ ಸೋಲಿಸಲು ಪಣ ತೊಟ್ಟಿವೆ. ಆದರೆ , ಎರಡೂ ಪಕ್ಷಗಳಲ್ಲಿ ಭಿನ್ನಮತವಿದ್ದು, ಈ ಮಧ್ಯೆ ಕೆಲ ಮುಖಂಡರು ಕಾಂಗ್ರೆಸ್ ​ನತ್ತ ಮುಖ ಮಾಡುತ್ತಿದ್ದಾರೆ.

ಈ ಮಧ್ಯೆ ಇದೀಗ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ  ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.  ಹೆಚ್.ಕೆ ಪಾಟೀಲ್.  ಶಾಸಕ ಲಕ್ಷ್ಮಣ್ ಸವದಿ, ಎಂಎಲ್ ಸಿ ಜಗದೀಶ್ ಶೆಟ್ಟರ್ ಉಪಸ್ಥಿತರಿದ್ದರು.

ಕಾಂಗ್ರೆಸ್ ಸೇರ್ಪಡೆ  ಬಳಿಕ ಮಾತನಾಡಿದ ಮಾಜಿ ಶಾಸಕ ರಾಮಪ್ಪ ಲಮಾಣಿ, ಯಾವುದೇ ಕಂಡಿಷನ್ ಹಾಕದೇ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ.  ನೋವು ವ್ಯಕ್ತಪಡಿಸಲು ಕಾಂಗ್ರೆಸ್ ಸೇರ್ಪಡೆಯಾದೆ. ಜಗದೀಶ್ ಶೆಟ್ಟರ್ ಜೊತೆ ಸಾಕಷ್ಟು ಮಾಜಿ ಶಾಸಕರು ಸಂಪರ್ಕದಲ್ಲಿದ್ದಾರೆ  ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಹಲವು ನಾಯಕರು ಸಂಪರ್ಕದಲ್ಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಧೂಳೀಪಟವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಬಲಪಡಿಸಲು ನಾನು ಕೆಲಸ ಮಾಡುತ್ತೇನೆ ಎಂದು ಹೇಳಿದರು.

Related posts

ನಮೋ ಬ್ರಿಗೇಡ್ 2.0 ಆಶ್ರಯದಲ್ಲಿ ಬೈಕ್ ಯಾತ್ರೆ

ಹಿಂದೂ ಮಹಾಸಭಾ ಗಣಪತಿ ದರ್ಶನ ಪಡೆದ ಸಚಿವ ಮಧು ಬಂಗಾರಪ್ಪ: ಶಾಸಕ ಎಸ್.ಎನ್. ಚನ್ನಬಸಪ್ಪ ಉಪಸ್ಥಿತಿ

ನಿವೇಶನಗಳ ಹಂಚಿಕೆಯಲ್ಲಿ ತಾರತಮ್ಯ: ಗ್ರಾಮಸ್ಥರಿಂದ ಪ್ರತಿಭಟನೆ.