ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಓರ್ವ ಸ್ವಾಮೀಜಿ ಮತ್ತು ರಾಜ್ಯದ ಮೂವರು ಸಚಿವರಿಗೆ ಜೀವಬೆದರಿಕೆ ಪತ್ರ.

ಬೆಳಗಾವಿ:   ರಾಜ್ಯದ ಮೂವರು ಸಚಿವರು ಮತ್ತು ಸ್ವಾಮೀಜಿಯೊಬ್ಬರಿಗೆ ದುಷ್ಕರ್ಮಿಗಳು ಬೆದರಿಕೆ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀ, ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ ಮತ್ತು ಪ್ರೀಯಾಂಕ್ ಖರ್ಗೆ  ಸೇರಿ ಪ್ರಗತಿಪರರು ವಿಚಾರವಾದಿಗಳಿಗೆ ಜೀವ ಬೆದರಿಕೆ ಪತ್ರ ಬಂದಿದೆ ಎನ್ನಲಾಗಿದೆ.

ಕಳೆದ ತಿಂಗಳಷ್ಟೆ ನಿಜಗುಣಾನಂದ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬಂದಿತ್ತು. ಈಗ ಮತ್ತೆ ಅದೇ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲೂರು ನಿಷ್ಕಲಮಂಟಪಕ್ಕೆ ಪತ್ರ ಬಂದಿದೆ. ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ.ಅಥವಾ ಸಾವಿನ ಪತ್ರವಂತಾದರೂ ತಿಳಿ, ನಾನು ನಿನ್ನ ಜತೆ ತಮಾಷೆ‌ ಮಾಡುತ್ತಿಲ್ಲ. ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೆ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ. ನೀನು ಮನುಷ್ಯ ರೂಪದಲ್ಲಿರುವ ರಾಕ್ಷಸ ಎಂದು ಪತ್ರದಲ್ಲಿ ದುಷ್ಕರ್ಮಿಗಳು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

Related posts

ರಾಜ್ಯದಲ್ಲಿ ಅತಿವೃಷ್ಠಿ, ಬರಗಾಲ: ಬೇಳೆಕಾಳುಗಳ ಬೆಲೆಯಲ್ಲಿ ಏರಿಕೆ..

30 ದಿನದಲ್ಲಿ ಸಾಲಗಾರರಿಗೆ ಆಸ್ತಿಗಳ ದಾಖಲೆ ನೀಡದಿದ್ರೆ ನಿತ್ಯ 5000 ರೂ. ದಂಡ- ಆರ್ ಬಿಐನಿಂದ ಹೊಸ ನಿಯಮ.

ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವೆನೆ ಮಾಡಲ್ಲ ಯಾಕೆ..? ವೈಜ್ಞಾನಿಕ ಕಾರಣವೇನು ಗೊತ್ತೆ..?