ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಚಿವ ಡಿ. ಸುಧಾಕರ್ ವಿರುದ್ಧ ಏಕಾಂಗಿ ಪ್ರತಿಭಟನೆ.

ಶಿವಮೊಗ್ಗ: ಸಚಿವ ಡಿ. ಸುಧಾಕರ್ ಅವರ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಜಾತಿ ನಿಂದನೆ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಸ್ಮಾರ್ತ ಬ್ರಾಹ್ಮಣರ ಸಂಘದ ಗಣೇಶ್ ಏಕಾಂಗಿಯಾಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಚಿವ ಡಿ. ಸುಧಾಕರ್ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಪದ ಬಳಸಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಕೂಡಲೇ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ರಾಜಕೀಯ ನಿವೃತ್ತಿ ಘೋಷಣೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಅಲ್ಲದೆ ಬ್ರಾಹ್ಮಣರ ಬಗ್ಗೆ ಜಾತಿ ನಿಂದನೆಯ ಅವಮಾನ ಮಾಡಿದ್ದು ಜಿಲ್ಲ ರಕ್ಷಣಾಧಿಕಾರಿಗಳು ಸ್ವಯಂ ದೂರು ದಾಖಲಿಸಿಕೊಂಡು ಜಾತಿ ನಿಂದನೆ ಆಧಾರದ ಮೇಲೆ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಅವರು, ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಸಂಘದ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

Related posts

ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಹೆಚ್ಚು ಹೊತ್ತು ಒಂದೇ ಕಡೆ ಕುಳಿತು ಕೆಲಸ ಮಾಡ್ತೀರಾ. ಹಾಗಾದ್ರೆ ಇರಲಿ ಎಚ್ಚರ..

ಹೊಸ ರಾಜ್ಯಾಧ್ಯಕ್ಷರ ನೇಮಕವಾಗುವ  ತನಕ ನೀವೇ ನಾಯಕತ್ವ ವಹಿಸಿಕೊಳ್ಳಿ- ಬಿಎಸ್ ವೈಗೆ ಬಿಜೆಪಿ ಶಾಸಕರಿಂದ ಒತ್ತಾಯ