ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

NEP ರದ್ದುಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಹೊಸ ಟೆನ್ಷನ್ ಶುರು..!

ಬೆಂಗಳೂರು: ದೇಶಾದ್ಯಂತ ರಾಷ್ಟ್ರೀಯ ಶಿಕ್ಷಣ ನೀತಿ(NEP) ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಈಗಾಗಲೇ ಹಲವು ರಾಜ್ಯಗಳು ಎನ್ ಇಪಿಯನ್ನು ಅಳವಡಿಸಿಕೊಂಡಿವೆ. ಅಂತೆಯೇ ರಾಜ್ಯದಲ್ಲಿ  ಹಿಂದಿನ ಬಿಜೆಪಿ ಸರ್ಕಾರವೂ ಸಹ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯನ್ನು ಜಾರಿಗೆ ತಂದಿತ್ತು. ಇದೀಗ ಮುಂದಿನ ವರ್ಷದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಎನ್ ಇಪಿಯನ್ನ ರದ್ಧುಗೊಳಿಸಲು ಮುಂದಾಗಿದೆ.

. ಈ ಸಂಬಂಧ ರಾಜ್ಯದ ಎಲ್ಲ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಹೇಳಿದ್ದರು. ಆದರೆ ಇದೀಗ ಇವರಿಗೆ ಹೊಸ ಟೆನ್ಷನ್ ಶುರುವಾಗಿದೆ.  ಎನ್ ಇಪಿ ರದ್ದುಗೊಳಿಸಲು ಮುಂದಾಗಿರುವ  ರಾಜ್ಯ ಸರ್ಕಾರದ ನಡೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆಕ್ಷೇಪ ವ್ಯಕ್ತಪಡಿಸಿವೆ.

ಸರ್ಕಾರ ಮುಂದಿನ ವರ್ಷದಿಂದ ಎನ್ಇಪಿ ರದ್ದುಪಡಿಸಲು ನಿರ್ಧರಿಸಿದೆ. ಈ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ನಮಗೆ ಎನ್ಇಪಿ ಬೇಕು, ಎಸ್ಇಪಿ ಬೇಡ ಅಂತ ಪಟ್ಟು ಹಿಡಿದಿವೆ. ಅಂತಾರಾಷ್ಟ್ರೀಯ ಮಕ್ಕಳ ಜೊತೆಗೆ ಸ್ಪರ್ಧಿಸಲು ಎನ್ಇಪಿ ಅಗತ್ಯವಿದೆ. ಎಸ್ಇಪಿ ಪಠ್ಯಕ್ರಮ ವ್ಯವಸ್ಥೆಯಿಂದ ಶೈಕ್ಷಣಿಕ ಭವಿಷ್ಯಕ್ಕೆ ಸಮಸ್ಯೆಯಾಗುತ್ತೆ. ಎನ್ಇಪಿ ಲೋಪ ದೋಷ ಸರಿಪಡಿಸಿಕೊಂಡು ಕೊಂಚ ಬದಲಾವಣೆ ಮಾಡಿಕೊಂಡು, ಎನ್ಇಪಿ ಮುಂದುವರೆಸಬೇಕು ಅಂತ ಖಾಸಗಿ ಶಾಲೆಗಳು ಒತ್ತಾಯ ಹೇರುತ್ತಿವೆ. ಇದರಿಂದ ಸರ್ಕಾರಕ್ಕೆ ಹೊಸ ಟೆನ್ಷನ್ ಶುರುವಾಗಿದೆ.

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಎನ್ಇಪಿಯನ್ನು ರದ್ದುಪಡಿಸುವುದಾಗಿ ಭರವಸೆ ನೀಡಿತ್ತು. ಬದಲಿಗೆ ರಾಜ್ಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವುದಾಗಿ ಹೇಳಿತ್ತು. ಅದರಂತೆ ಇದೀಗ ಎನ್ಇಪಿ ರದ್ದು ಮಾಡಲು ಸರ್ಕಾರ ಯೋಜನೆ ರೂಪಿಸಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರವು ಪರಿಚಯಿಸಿದ ಎನ್ಇಪಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

 

Related posts

ನಾಳೆ ಬೆಂಗಳೂರು ಸಂಪೂರ್ಣ ಬಂದ್‌: ನೂರಾರು ಸಂಘ ಸಂಸ್ಥೆಗಳಿಂದ ಬೆಂಬಲ.

ಶಾಲೆಗಳಲ್ಲಿ ಮೊಟ್ಟೆ, ಬಾಳೇಹಣ್ಣು ವಿತರಣೆ ಯೋಜನೆಗೆ ಚಾಲನೆ: ಮಕ್ಕಳ ಜೊತೆಯೇ ಕುಳಿತು ಊಟ ಮಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಭದ್ರಾ ಜಲಾಶಯದ ಮುಂಗಾರು ಬೆಳೆಗಳಿಗೆ ನೀರು