ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಉಪನ್ಯಾಸಕರೊಬ್ಬರಿಗೆ ಲಾಂಗ್ ತೋರಿಸಿ ದರ್ಪ ಮೆರೆದ ವಿದ್ಯಾರ್ಥಿ

ಮಂಡ್ಯ:  ಇತ್ತೀಚಿನ ದಿನಗಳಲ್ಲಿ ಶಿಕ್ಷಣ ವ್ಯವಸ್ಥೆ ಬದಲಾಗಿದ್ದು,  ವಿದ್ಯಾರ್ಥಿಗಳಿಗೆ ಶಿಕ್ಷಕರು ಬೈಯುವಂತಿಲ್ಲ ಹೊಡೆಯುವಂತಿಲ್ಲ ಎಂಬ ನಿಯಮವಿದೆ. ಆದರೆ ಈ ನಿಯಮ ಕೆಲವು ಕಡೆಗಳಲ್ಲಿ ದುರುಪಯೋಗವಾಗುತ್ತಿದೆ. ಹೌದು, ಪೋಷಕರಿಗೆ ದೂರು ನೀಡಿದ್ದಕ್ಕೆ ಉಪನ್ಯಾಸಕರೊಬ್ಬರಿಗೆ ವಿದ್ಯಾರ್ಥಿ ಮಚ್ಚು ತೋರಿಸಿ ಎಚ್ಚರಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ತರಗತಿಗೆ ಬರುತ್ತಿಲ್ಲವೆಂದು ತನ್ನ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದಕ್ಕೆ ವಿದ್ಯಾರ್ಥಿಯೊಬ್ಬ , ಉಪನ್ಯಾಸಕರಿಗೆ ಲಾಂಗ್ ತೋರಿಸಿ ದರ್ಪ ಮೆರೆದಿದ್ದಾನೆ.

ವಿದ್ಯಾರ್ಥಿ ಉದಯ್ ಗೌಡ (18) ಎಂಬ ವಿದ್ಯಾರ್ಥಿ  ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾನ. ಈತ ಸರಿಯಾಗಿ ಬರುತ್ತಿರಲಿಲ್ಲ ಹೀಗಾಗಿ ಉಪನ್ಯಾಸಕ ಚಂದನ್ ಎಂಬುವವರು , ಉದಯ್​ ಕ್ಲಾಸ್​ಗೆ ಸರಿಯಾಗಿ ಬರುತ್ತಿಲ್ಲವೆಂದು ಆತನ ಪೋಷಕರಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿ ಉದಯ್ ಗೌಡ ಈ  ರೀತಿ ಲಾಂಗ್ ತೋರಿಸಿ ಎಚ್ಚರಿಸಿದ್ದಾನೆ ಎನ್ನಲಾಗಿದೆ.

Related posts

ದಿನಕ್ಕೆ ಕನಿಷ್ಟ 4 ಸಾವಿರ ಹೆಜ್ಜೆ ಹಾಕಿದ್ರೆ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ ಗೊತ್ತೆ..?

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ.

ಪ್ಯಾನಸ್ತೈನ್ ಬೆಂಬಲಿಸಿ ಕದನ ವಿರಾಮಕ್ಕೆ ಒತ್ತಾಯಿಸಿದ ನಿರ್ಣಯ ಅಂಗೀಕರಿಸಿದ ಕಾಂಗ್ರೆಸ್.