ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು.

 

ಗದಗ:  ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ.

ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಡಿಕ್ಕಿ ಹೊಡೆದಿದ್ದು, ಟಾಟಾ ಸುಮೋದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ಹಲವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಮೃತರು ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು . ಬಾಲೆ ಹೊಸೂರ ಮಠಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನರೇಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಾಂತಿ, ಕ್ರಾಂತಿ ಮತ್ತು ಅಧ್ಯಾತ್ಮದ  ಮೂಲಕ ನಮ್ಮ ಹಿರಿಯರು ದೇಶಕ್ಕೆ ಸ್ವಾತಂತ್ರ ತಂದು ಕೊಟ್ಟಿದ್ದಾರೆ-ನಾಡೋಜ ಡಾ. ಮಹೇಶ ಜೋಶಿ ಅಭಿಪ್ರಾಯ

ಮೈಸೂರು ರಾಜವಂಶಸ್ಥ ಯಧುವೀರ ಒಡೆಯರ್ ಅವರಿಗೆ ಸನ್ಮಾನ.

ಮಹಿಳಾ ಮೀಸಲಾತಿ ಯೋಜನೆ ಮಸೂದೆ ಮಂಡನೆ: ಐತಿಹಾಸಿಕ ತೀರ್ಮಾನ- ಕೆಎಸ್ ಈಶ್ವರಪ್ಪ.