ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಉದ್ಯಮಿಗೆ ವಂಚನೆ ಪ್ರಕರಣ: 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಅಭಿನವ ಹಾಲಶ್ರೀ .

ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಚೈತ್ರಾ ಕುಂದಾಪುರ ಆ್ಯಂಡ್ ​ ಗ್ಯಾಂಗ್ ​ನಿಂದ 5 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಸೆಪ್ಟೆಂಬರ್ 29ರವರೆಗೆ ಹಾಲಶ್ರೀಯನ್ನು ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.  ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ, ಮಹಜರು ಪ್ರಕ್ರಿಯೆ ನಡೆಸಬೇಕರುವುದರಿಂದ ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕೆಂದು ಕೋರ್ಟ್ ನಲ್ಲಿ ಸಿಸಿಬಿ ಪೊಲೀಸರು ಮನವಿ ಮಾಡಿದ್ದರು.

ಸಿಸಿಬಿ ಈ ಮನವಿ ಪುರಸ್ಕರಿಸಿದ ಕೋರ್ಟ್, ಆರೋಪಿ  ಹಾಲಶ್ರೀಯನ್ನು ಸೆಪ್ಟೆಂಬರ್ 29ರ ವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಇನ್ನು ಹಾಲಶ್ರೀ ಜಾಮೀನು ಅರ್ಜಿ ವಿಚಾರಣೆಯನ್ನು ಕಾಯ್ದಿರಿಸಿದೆ.

ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಎನ್ನುವರಿಗೆ ಕೋಟ್ಯಂತರ ರೂಪಾಯಿ ಪಡೆದು ವಂಚನೆ ಮಾಡಿದ ಪ್ರಕರಣ ಇದಾಗಿದೆ. ತಲೆಮರೆಸಿಕೊಂಡಿದ್ದ ಪ್ರಕರಣದ ಮೂರನೇ ಆರೋಪಿ ಹಾಲಶ್ರೀಯನ್ನು ನಿನ್ನೆ ಒಡಿಶಾದ ಕಟಕ್ ​ನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು.

Related posts

44 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಎಲ್ಲೆಡೆ  ಭದ್ರತೆ ಒದಗಿಸಲು ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ.

ಹುತಾತ್ಮ ಯೋಧ ಪ್ರಾಂಜಲ್ ಅಂತಿಮಯಾತ್ರೆ: ಶೋಕಸಾಗರದಲ್ಲಿ ಕುಟುಂಬ.

ಕತ್ತಲೆಯಲ್ಲಿ ಮೊಬೈಲ್ ಫೋನ್ ನೋಡೋ ಅಭ್ಯಾಸವಿದ್ರೆ ಎಚ್ಚರ: ಬ್ರೈನ್ ಟ್ಯೂಮರ್ ಬರುತ್ತೆ ಹುಷಾರ್.