ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಚುನಾವಣಾ ಸಮೀಕ್ಷೆ: ಎಬಿಪಿ-ಸಿ ವೋಟರ್ಸ್ ಸರ್ವೇ ಪ್ರಕಾರ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಾಬಲ್ಯ..

ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ಗಢ ವಿಧಾನಸಭೆಗೆ ಚುನಾವಣೆಗಳು ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಕಾರ್ಯ ಶುರುವಾಗಿದೆ. ಈ ನಡುವೆ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಚುರುಕುಗೊಂಡಿದೆ.  ನಾಲ್ಕು ರಾಜ್ಯಗಳ ಸಮೀಕ್ಷೆಗಳು ಹೊರಬಿದ್ದಿದ್ದು ಎಬಿಪಿ-ಸಿ ವೋಟರ್ಸ್ ಸರ್ವೇ ಪ್ರಕಾರ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮೆರೆಯಲಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಮಣೆ

ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಪಕ್ಷವು 43 ರಿಂದ 55 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ. ಬಿಜೆಪಿ 5 ರಿಂದ 11 ಸ್ಥಾನಗಳನ್ನು ಗೆಲ್ಲಬಹುದು. ಆಡಳಿತಾರೂಢ ಬಿಆರ್ಎಸ್ 49 ರಿಂದ 61 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. ಎಐಎಂಐಎಂ ಪಕ್ಷವು 4 ರಿಂದ 10 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ಹೇಳಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ . 

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಕಾಂಗ್ರೆಸ್ ಪಕ್ಷವು ಶೇ 44.3ರಷ್ಟು ಮತಗಳನ್ನು ಪಡೆಯುವ ಮೂಲಕ 118 ರಿಂದ 130 ಸಿಟುಗಳನ್ನು ಗೆಲ್ಲುವ ಸಾಧ್ಯತೆಯಿದೆ. ಮತ್ತೊಂದೆಡೆ, 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಯು ಶೇ 42.1 ಮತಗಳನ್ನು ಗಳಿಸುವ ಮೂಲಕ 99 ರಿಂದ 111 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆಯಲ್ಲಿ ಬಹಿರಂಗವಾಗಿದೆ

ಎಬಿಪಿ-ಸಿವೋಟರ್ ಸಮೀಕ್ಷೆಯಲ್ಲಿ ಮಾಜಿ ಸಿಎಂ ಮತ್ತು ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಅತ್ಯಂತ ಆದ್ಯತೆಯ ಸಿಎಂ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ ಶೇ 42.4 ರಷ್ಟು ಜನರು ಅವರ ಪರ ಒಲವು ತೋರಿದ್ದಾರೆ. ಶಿವರಾಜ್ ಸಿಂಗ್ ಚೌಹಾಣ್ ಅವರ ಪರ ಶೇ 38 ರಷ್ಟು ಜನರು ಒಲವು ತೋರಿದ್ದಾರೆ.

ಛತ್ತೀಸ್ ಗಢದಲ್ಲೂ ಕಾಂಗ್ರೆಸ್ ಹವಾ

ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಪಕ್ಷವು 45ರಿಂದ 51 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿಯು ಶೇ 42.7 ರಷ್ಟು ಮತಗಳನ್ನು ಪಡೆಯುವ ಮೂಲಕ 90 ಸದಸ್ಯ ಬಲದ ಛತ್ತೀಸ್ಗಢ ವಿಧಾನಸಭೆಯಲ್ಲಿ 36 ರಿಂದ 42 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಶೇ.44.8ರಷ್ಟು ಮತಗಳು ಕಾಂಗ್ರೆಸ್ ಗೆ ಸಿಗಲಿವೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.

ಭೂಪೇಶ್ ಬಘೇಲ್ ಅವರು ಸಿಎಂಗೆ ಸ್ಥಾನದ ಅಚ್ಚುಮೆಚ್ಚಿನ ಅಭ್ಯರ್ಥಿಯಾಗಿದ್ದಾರೆ. ಶೇ 45.8 ರಷ್ಟು ಜನರು ಅವರ ಒಲವು ಹೊಂದಿದ್ದಾರೆ. ಕೇವಲ ಶೇ 20.7 ರಷ್ಟು ಮತದಾರರು ಮಾಜಿ ಸಿಎಂ ಮತ್ತು ಬಿಜೆಪಿ ನಾಯಕ ರಮಣ್ ಸಿಂಗ್ ಪರ ಬೆಂಬಲ ಸೂಚಿಸಿದ್ದಾರೆ.

ರಾಜಸ್ಥಾನದಲ್ಲಿ ಬಿಜೆಪಿಗೆ ಮಣೆ

ರಾಜಸ್ಥಾನದಲ್ಲಿ ಈ ಬಾರಿ ಬಿಜೆಪಿ ಅಧಿಕಾರ ಹಿಡಿಯಬಹುದು ಎಂದು ಸಮೀಕ್ಷೆ ಊಹಿಸಿದೆ. ಬಿಜೆಪಿಯು ಶೇ 44.8 ರಷ್ಟು ಮತಗಳನ್ನು ಪಡೆಯುವುದರೊಂದಿಗೆ 114 ರಿಂದ 124 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. 200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ ಶೇ 41.7 ರಷ್ಟು ಮತಗಳೊಂದಿಗೆ 67 ರಿಂದ 77 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿ ಹೆಚ್ಚು ಆದ್ಯತೆಯ ಅಭ್ಯರ್ಥಿಯಾಗಿ ಉಳಿದಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ ಶೇ 40.7ರಷ್ಟು ಜನರು ಅವರನ್ನು ಬೆಂಬಲಿಸಿದ್ದಾರೆ. ಮಾಜಿ ಸಿಎಂ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೇ ಅವರಿಗೆ ಶೇ 24.7 ರಷ್ಟು ಜನರಿಗೆ ಬೆಂಬಲ ನೀಡಿದ್ದಾರೆ. ಅವರು ಎರಡನೇ ಅತ್ಯಂತ ಆದ್ಯತೆಯ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಮೂರನೇ ಸ್ಥಾನವನ್ನು ಪಡೆದರು, ಪ್ರತಿಕ್ರಿಯಿಸಿದವರಲ್ಲಿ ಕೇವಲ ಶೇ 10.5 ರಷ್ಟು ಜನರು ಪೈಲಟ್ ಅವರನ್ನು ಬೆಂಬಲಿಸಿದ್ದಾರೆ.

 

Related posts

 ತಾಯಿ ಚಾಮುಂಡೇಶ್ವರಿ ಸನ್ನಿದಾನದಲ್ಲಿ ಹರಕೆ ತೀರಿಸಿದ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್.

ಮೋದಿ ಪ್ರಧಾನಿ ಆದ್ರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ರು: ಆದ್ರೆ ಈಗ ಅವರನ್ನೇ ಭೇಟಿ ಮಾಡ್ತಿದ್ದಾರೆ- ಹೆಚ್.ಡಿಕೆ  ಸಚಿವ ಡಾ. ಎಂ.ಸಿ ಸುಧಾಕರ್ ಟಾಂಗ್

ಪಂಚರಾಜ್ಯ ಚುನಾವಣೆ ಫಲಿತಾಂಶ ಬಳಿಕ: ತೆಲಂಗಾಣ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ..!