ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಟ ಶಿವರಾಜ್ ಕುಮಾರ್ ದಂಪತಿ.

ಬೆಂಗಳೂರು:  ಹಿರಿಯ ಕಲಾವಿದೆ ಲೀಲಾವತಿ ಅವರು ಬಹುದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಅವರು ಇಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರ ಮನೆಗೆ ನಟ ಶಿವರಾಜ್​ ಕುಮಾರ್​​ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಲೀಲಾವತಿ ಅವರ ತೋಟದ ಮನೆಯಲ್ಲಿದ್ದಾರೆ. ಇಂದು ನಟ ಶಿವರಾಜ್​ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್​ ಕುಮಾರ್​​ ಅವರು ನಿವಾಸಕ್ಕೆ​​ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

 

ಮನೆಗೆ ಆಗಮಿಸಿದ್ದ ಶಿವರಾಜ್ ಕುಮಾರ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ವಿನೋದ್ ರಾಜ್ , ಅಮ್ಮನ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಲೀಲಾವತಿ ಅವರಿಗೆ ಈಗ 87 ವರ್ಷವಾಗಿದ್ದು,  600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

Related posts

ಅಗಲಿದ ಪುತ್ರನ ನೆನಪಲ್ಲಿ 500ಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಮುಚ್ಚಿದ ತಂದೆ!

ಲೋಕಾಯುಕ್ತದಿಂದ ತಾಲ್ಲೂಕುಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ

ಹುಲಿ ಉಗುರು ಪ್ರಕರಣ: ನಟ ಹಾಗೂ ಸಂಸದ ಜಗ್ಗೇಶ್ ಗೂ ಸಂಕಷ್ಟ.