ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸೂರ್ಯನತ್ತ ಚಿಮ್ಮಿದ  ಆದಿತ್ಯ L-1: ಇಸ್ರೋದಿಂದ ಯಶಸ್ವಿ ಉಡಾವಣೆ.

ಆಂಧ್ರಪ್ರದೇಶ: ಚಂದ್ರಯಾನ-3 ಯಶಸ್ವಿ ಬಳಿಕ ಭಾರತೀಯ ಬಾಹ್ಯಾಕಾಶ ಸಂಸ್ಥೆ(ISRO)  ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಭಾರತದ ಮೊದಲ ಸೂರ್ಯಯಾನದ ಆದಿತ್ಯ ಎಲ್‌1 ಮಿಷನ್(Aditya L1 Mission) ಯಶಸ್ವಿಯಾಗಿ ಲಾಂಚ್ ಆಗಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತದ ಮಹತ್ವಕಾಂಕ್ಷೆಯ ಆದಿತ್ಯ ಎಲ್‌1 ನೌಕೆಯನ್ನ ಇಸ್ರೋ ಉಡಾವಣೆ ಮಾಡಿದ್ದು ಆದಿತ್ಯ ಎಲ್1 ನೌಕೆ ಸೂರ್ಯನತ್ತ ಹೊರಟಿದೆ.

ಆದಿತ್ಯ ಎಲ್1 ನೌಕೆ, ಒಟ್ಟು 7 ವೈಜ್ಞಾನಿಕ ಉಪಕರಣಗಳನ್ನ ಹೊತ್ತು ಸೂರ್ಯಶೋಧಕ್ಕೆ  ಹೊರಟಿದೆ.  ಇದರಲ್ಲಿ ಮೂರು ಉಪಕರಣಗಳು ಸೂರ್ಯನನ್ನು ನೋಡುತ್ತಾ ವಿವಿಧ ಭಾಗಗಳ ಅಧ್ಯಯನ ಮಾಡುತ್ತೆ. ಉಳಿದ ಮೂರು ಉಪಕರಣಗಳು, ಸೂರ್ಯನಿಂದ ಬರುವ ವಿಕಿರಣ ಮತ್ತು ವಸ್ತುಗಳನ್ನು ಅಳತೆ ಮಾಡುವ ಕೆಲಸ ಮಾಡುತ್ತೆ. ವಿಶೇಷ ಅಂದ್ರೆ ಆದಿತ್ಯ ಎಲ್‌1ನಲ್ಲಿರುವ ಉಪಕರಣಗಳು ಎಲ್‌1 ಪಾಯಿಂಟ್‌ನಲ್ಲೇ ಸುತ್ತುತ್ತಾ ಕೃತಕ ಗ್ರಹಣ ಕೂಡ ಸೃಷ್ಟಿಸಬಲ್ಲವು ಎನ್ನಲಾಗಿದೆ.

Related posts

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಹೊಸ ಪ್ಲಾನ್: ಇನ್ಮುಂದೆ ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲೆ ಶಿಕ್ಷಕರು..

ಬರ ಪರಿಸ್ಥಿತಿ ಅವಲೋಕನಕ್ಕಾಗಿ ಶೀಘ್ರದಲ್ಲೇ ರಾಜ್ಯಕ್ಕೆ ಕೇಂದ್ರ ನಿಯೋಗ…

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ಬಗ್ಗೆ ತೀರ್ಮಾನ- ಸಿಎಂ ಸಿದ್ದರಾಮಯ್ಯ ಹೇಳಿಕೆ