ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಇತ್ತ ಗ್ಯಾಸ್ ಬೆಲೆ ಇಳಿಕೆ ಬೆನ್ನಲ್ಲೆ ಅತ್ತ ಶೀಘ್ರದಲ್ಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ?

ನವದೆಹಲಿ: ದೇಶದಲ್ಲಿ ಕೇಂದ್ರ ಸರ್ಕಾರ  200 ರೂ.ಅಡುಗೆ ಅನಿಲ ದರ ಇಳಿಕೆ ಮಾಡಿ ಗ್ರಾಹಕರಿಗೆ ಹೊರೆ ತಗ್ಗಿಸಿದ ಬೆನ್ನಲ್ಲೆ ಇದೀಗ ಇತ್ತ ಶೀಘ್ರದಲ್ಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಕಂಡು ಬರುತ್ತಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಸಜ್ಜಾಗುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರದ ಎನ್ಡಿಎ ಸರ್ಕಾರ ಕೆಲ ದಿನಗಳ ಹಿಂದಷ್ಟೇ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 200 ರೂ. ಇಳಿಸಿತ್ತು. ಆದರೆ ಈಗ ಶೀಘ್ರದಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.

ಹೌದು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕೆಲ ತಿಂಗಳಿಂದ ಏರಿಕೆ ಕಂಡಿದೆ. ಇದರಿಂದಾಗಿ ಭಾರತದ ತೈಲ ಕಂಪನಿಗಳಿಗೆ ಭಾರಿ ಪ್ರಮಾಣದಲ್ಲಿ ನಷ್ಟವಾಗುತ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 95 ಡಾಲರ್ ಆಗಿರುವುದರಿಂದ ಭಾರತದಲ್ಲಿ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಶೀಘ್ರದಲ್ಲೇ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರವು ಕಳೆದ ವರ್ಷದ ಮೇ ತಿಂಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸುಂಕವನ್ನು ಕಡಿತಗೊಳಿಸಿತ್ತು. ಆ ಮೂಲಕ ಜನರ ಹೊರೆಯನ್ನು ತುಸು ಕಡಿಮೆ ಮಾಡಿತ್ತು. ಇದರಿಂದಾಗಿ ಕಳೆದ ವರ್ಷದಿಂದಲೂ ಭಾರತದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆಯು 100 ರೂ. ಅಥವಾ ಇದರ ಆಸುಪಾಸಿನಲ್ಲಿತ್ತು. ಆದರೆ, ಹಣದುಬ್ಬರದ ಏರಿಕೆಯಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದುಬಂದಿದೆ.

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಇಳಿಸಿದಾಗ ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ ಕಚ್ಚಾತೈಲದ ಬೆಲೆ 85 ಡಾಲರ್ ಇತ್ತು. ಆದರೀಗ ಅದು 95 ಡಾಲರ್ ಗೆ ಏರಿಕೆಯಾಗಿದೆ. ಇದರಿಂದಾಗಿ ಭಾರತದ ಸರ್ಕಾರಿ ಒಡೆತನದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸೇರಿ ಹಲವು ಕಂಪನಿಗಳಿಗೆ 21 ಸಾವಿರ ಕೋಟಿ ರೂ. ನಷ್ಟವಾಗಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡುವುದು ತೈಲ ಕಂಪನಿಗಳಿಗೆ ಅನಿವಾರ್ಯವಾಗಿದೆ ಎಂದು ತಿಳಿದುಬಂದಿದೆ.

 

Related posts

 ನ.27 ರಂದು ಶಿರಾಳಕೊಪ್ಪ ಬಸವೇಶ್ವರ ಸಹಕಾರ ಬ್ಯಾಂಕ್ ನ 111ನೇ ವಾರ್ಷಿಕೋತ್ಸವ

ವಕೀಲರ ಮುಂದೆ ನಡೆಯುವ ವಿವಾಹಕ್ಕೂ ಮನ್ನಣೆ- ಸುಪ್ರೀಂಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿ ಮತ್ತು ಸಾಲ ವಿವರ ಬಹಿರಂಗ..! ಸಂಪೂರ್ಣ ಮಾಹಿತಿ ಹೀಗಿದೆ..