ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅಹಿಂಸಾ ಮಾರ್ಗ, ಸರಳ ಜೀವನ ಶೈಲಿ ಆದರ್ಶವು ಅಗತ್ಯ-ಎಚ್.ಡಿ.ರಮೇಶ್ ಶಾಸ್ತ್ರೀ

ಶಿವಮೊಗ್ಗ: ರಾಮ ರಾಜ್ಯದ ಕನಸು ನನಸಾಗಿಸಲು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಅಹಿಂಸಾ ಮಾರ್ಗ, ಸರಳ ಜೀವನ ಶೈಲಿಯ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರೀ ಹೇಳಿದರು.

ಶಿವಮೊಗ್ಗ ನಗರದ ಬಿ.ಎಚ್.ರಸ್ತೆಯಲ್ಲಿರುವ ಸ್ಕೌಟ್ ಭವನದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಪ್ರಯಕ್ತ ಹಮ್ಮಿಕೊಳ್ಳಲಾದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶ ಕಂಡ ಮಹಾನ್ ಸರಳ ವ್ಯಕ್ತಿ ಗಾಂಧೀಜಿ, ದೇಶದ ಸ್ವಾತಂತ್ರ್ಯಕ್ಕೆ ನೀಡಿದ ಕೊಡುಗೆ ಅಪಾರ ಎಂದು ತಿಳಿಸಿದರು.

ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಹೋರಾಟಗಾರರ ತ್ಯಾಗ ಬಲಿದಾನದ ಯಶೋಗಾಥೆಗಳನ್ನು ಮಕ್ಕಳಿಗೆ ತಿಳಿಸಬೇಕು. ದೇಶಪ್ರೇಮದಿಂದ ಜೀವನ ನಡೆಸುವ ಮಹತ್ವದ ಅರಿವು ಮೂಡಿಸಬೇಕು. ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಜ್ಞಾನ ವೃದ್ಧಿಯಾಗುತ್ತದೆ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜೀವನ ಶೈಲಿ ಎಲ್ಲರಿಗೂ ಮಾರ್ಗದರ್ಶನ. ಬದುಕಿನಲ್ಲಿ ಪಾಲಿಸುತ್ತಿದ್ದ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ದೇಶಕ್ಕಾಗಿ ಜೀವನ ನಡೆಸಿದ ರೀತಿ ಎಲ್ಲರಿಗೂ ಸ್ಫೂರ್ತಿದಾಯಕ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ರಾಜೇಶ್ ಅವಲಕ್ಕಿ ಅವರು ಗಾಂಧೀಜಿ ಜೀವನ ಚರಿತ್ರೆ ಕುರಿತು ಮಕ್ಕಳಿಗೆ ಸಮಗ್ರವಾಗಿ ವಿವರಿಸಿದರು. ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಭಾರತಿ ಡಾಯಸ ಅವರು ಸರ್ವಧರ್ಮ ಪ್ರಾರ್ಥನೆ ನೆರವೇರಿಸಿದರು.

ಜಿಲ್ಲಾ ಸ್ಕೌಟ್ ಆಯುಕ್ತ ಬಿಂದುಕುಮಾರ್ ಕೆ., ಜಿಲ್ಲಾ ಕಾರ್ಯದರ್ಶಿ ಎಚ್.ಪರಮೇಶ್ವರ್, ಜಿಲ್ಲಾ ಗೈಡ್ ಆಯುಕ್ತೆ ಶಕುಂತಲಾ ಚಂದ್ರಶೇಖರ್, ಸಹ ಕಾರ್ಯದರ್ಶಿ ವೈ.ಆರ್.ವಿರೇಶಪ್ಪ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್, ಗೈಡ್ ನಾಗಪ್ರಿಯ, ಗೈಡ್ ಮೀನಾಕ್ಷಮ್ಮ, ಮಕ್ಕಳು ಉಪಸ್ಥಿತರಿದ್ದರು.

Related posts

ಅನ್ನಭಾಗ್ಯ ಯೋಜನೆಯಲ್ಲಿ ಆಹಾರ ಇಲಾಖೆಯಿಂದ ಹೊಸ ಪ್ಲಾನ್.

ಸಾಮಾನ್ಯ ವರ್ಗದಿಂದ ಆಯ್ಕೆಯಾದ್ರೂ ಮೀಸಲಾತಿಯಡಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅವಕಾಶ- ಹೈಕೋರ್ಟ್.

ಆಕಾಶವಾಣಿ ಭದ್ರಾವತಿಯಲ್ಲಿ ಸುವರ್ಣ ಕರ್ನಾಟಕ ಸಂಭ್ರಮ.