ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗೂಗಲ್ ಮತ್ತು ಫೇಸ್ಬುಕ್ ಗೆ ಪತ್ರ ಬರೆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ.

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದ್ದು ಈಗಾಗಲೇ ತನ್ನ ಮಿತ್ರಪಕ್ಷಗಳ ಜೊತೆಗೂಡಿ ಈಗಾಗಲ ಇಂಡಿಯಾ (I.N.D.I.A) ಮೈತ್ರಿಕೂಟ ರಚಿಸಿದೆ. ಇದೀಗ  ಇಂಡಿಯಾ (I.N.D.I.A) ಮೈತ್ರಿಕೂಟದ ಪರವಾಗಿ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಗೂಗಲ್ ಮತ್ತು ಫೇಸ್ಬುಕ್ ಗೆ ಪತ್ರ ಬರೆದಿದ್ದಾರೆ.

ಫೇಸ್ ಬುಕ್  ಹಾಗೂ ಗೂಗಲ್  ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (ಸಿಇಒ) ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ಲೋಕಸಭಾ ಚುನಾವಣೆಯುಲ್ಲಿ ಯಾವುದೇ ಒಂದು ಪಕ್ಷದ ಪರ ನಿಲ್ಲದೆ ತಟಸ್ಥತೆಯನ್ನು ಕಾಯ್ದುಕೊಳ್ಳುವಂತೆ ತಿಳಿಸಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ (BJP) ಕಡೆಗೆ ಫೇಸ್ ಬುಕ್, ವಾಟ್ಸಾಪ್ ಹಾಗೂ ಯೂಟ್ಯೂಬ್ ನ ಪಕ್ಷಪಾತದ ಬಗ್ಗೆ ವಾಷಿಂಗ್ಟನ್ ಪೋಸ್ಟ್ ಪತ್ರಿಕೆಯು ವರದಿ ಮಾಡಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಇಂಡಿಯಾ ಒಕ್ಕೂಟದ ಪರವಾಗಿ ಮಲ್ಲಿಕಾರ್ಜುನ್ ಖರ್ಗೆ ಎರಡು ಪುಟಗಳ ಪತ್ರ ಬರೆದಿದ್ದಾರೆ.

ಮೆಟಾ ಸಿಇಒ ಮಾರ್ಕ್ ಜುಕರ್ ಬರ್ಗ್ ಹಾಗೂ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಪತ್ರ ಹಂಚಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಚುನಾವಣೆ ಸಮೀಪದಲ್ಲೇ ಇದ್ದು, ಮತದಾನದ ಸಮಯದಲ್ಲಿ ಸಾಮಾಜಿಕ ಜಾಲತಾಣಗಳು ಯಾವುದೇ ರೀತಿಯಲ್ಲಿ ಕೋಮುಪ್ರಚೋದನೆಗೆ ಸಾಕ್ಷಿಯಾಗದೆ ತಟಸ್ಥತೆಯನ್ನು ಕಾಯ್ದುಕೊಳ್ಳುವಂತೆ ಹೇಳಿದ್ದಾರೆ.

ಈ ಪತ್ರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಡಿಎಂಕೆ ಸಂಸದ ಡಿ. ರಾಜಾ, ಸಿಪಿಐ (ಎಂ) ಮುಖಂಡ ಸೀತಾರಾಮ್ ಯೆಚೂರಿ, ಕಾಶ್ಮೀರದ ಮೆಹಬೂಬಾ ಮುಫ್ತಿ ಸೇರಿದಂತೆ I.N.D.I.A ಬ್ಲಾಕ್ನ 14 ನಾಯಕರು ಪತ್ರಕ್ಕೆ ಸಹಿ ಹಾಕಿದ್ದಾರೆ.

 

Related posts

3ನೇ ಸುತ್ತಿನ ಸಾರ್ವತ್ರಿಕ ಲಸಿಕಾಕರಣ ಯಶಸ್ವಿಗೊಳಿಸಲು ಮನವಿ

ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ,‌ ಕೆಲಸ ಮಾಡೋ ಆಸಕ್ತಿ ಇಲ್ಲ ಅಂದ್ರೆ ಜಾಗ ಖಾಲಿ- ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್  ವಾರ್ನಿಂಗ್.

ಜಗದೀಶ್.ಜಿ.ಶೇಠ್ ಗೆ ಏಕತಾ ಸಮಾಜ ಸೇವಾಶ್ರೀ ಪ್ರಶಸ್ತಿ.