ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ: ವಸತಿ ರಹಿತರಿಗೆ 3 ಲಕ್ಷ ಮನೆಗಳ ನಿರ್ಮಾಣ.

ಬೆಂಗಳೂರು : ರಾಜ್ಯ ಸರ್ಕಾರವು ವಸತಿ ರಹಿತರಿಗೆ 3 ಲಕ್ಷ ಮನೆಗಳ ನಿರ್ಮಾಣಕ್ಕೆ ಮಹತ್ವದ ನಿರ್ಧಾರ ಕೈಗೊಂಡಿದ್ದು ಈ ಮೂಲಕ ವಸತಿ ರಹಿತರಿಗೆ ಸಿಹಿಸುದ್ದಿ ನೀಡಿದೆ.

ಪ್ರಸಕ್ತ ವರ್ಷದಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಮಾಡಲು ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ನಾಡಿನ ವಸತಿ ರಹಿತ ಕುಟುಂಬಗಳಿಗೆ ನೆಮ್ಮದಿಯ ಸೂರು ಒದಗಿಸುವುದು ನಮ್ಮ ಉದ್ದೇಶವಾಗಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ 88 ಸಾವಿರಕ್ಕೂ ಅಧಿಕ ಮನೆಗಳನ್ನು ನಿರ್ಮಿಸಿಕೊಡಲಾಗಿದೆ, ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದರು.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

 

Related posts

ಡಿಕೆಶಿ ಮತ್ತೆ ತಿಹಾರ್  ಜೈಲಿಗೆ ಹೋಗುವ ಕಾಲ ಸಮೀಪಿಸಿದೆ ಎಂದ ಹೆಚ್.ಡಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್..

ಚಂದ್ರಯಾನ -3: ‘ಲ್ಯಾಂಡರ್ ಮಾಡ್ಯೂಲ್’ ಕಾರ್ಯಾಚರಣೆ ಯಶಸ್ವಿ: ಇಸ್ರೋ ಟ್ವೀಟ್..

ಶ್ರೀ ರಾಘವೇಂದ್ರ ಗುರುಗಳ ಆರಾಧನಾ ಮಹೋತ್ಸವ: ವಿಜೃಂಭಣೆಯ ರಥೋತ್ಸವ.