ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಗ್ರಾಮೀಣ ಜನತೆಗೊಂದು ಮಾಹಿತಿ : ಇನ್ಮುಂದೆ `ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈ ಎಲ್ಲಾ ಸೇವೆಗಳು ಲಭ್ಯ.

ಬೆಂಗಳೂರು: ಗ್ರಾಮೀಣ ಜನತೆಗೊಂದು ಸಿಹಿಸುದ್ಧಿ ಸಿಕ್ಕಿದ್ದು, ಸರ್ಕಾರಿ ದಾಖಲೆಗಳು, ಸವಲತ್ತುಗಳಿಗಾಗಿ ಗ್ರಾಮೀಣ ಜನತೆ ವಿವಿದೆಡೆ ಅಲೆಯುವುದನ್ನು ತಪ್ಪಿಸಲು ಗ್ರಾಮೀಣಭಿವೃದ್ಧಿ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.

ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಗ್ರಾಮೀಣ ಜನರಿಗೆ ಅವಶ್ಯಕವಿರುವ 22 ಸೇವೆಗಳನ್ನು ನೀಡಲಾಗುತ್ತಿದ್ದು, ಇವುಗಳೊಂದಿಗೆ ಹೊಸದಾಗಿ 44 ಅಗತ್ಯ ಸೇವೆಗಳನ್ನು ನೀಡಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯಿತಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ನು 66 ಸರ್ಕಾರಿ ಸೇವೆಗಳು ಸಿಗಲಿವೆ.

ಗ್ರಾಮೀಣಾಭಿವೃದ್ಧಿ ಇಲಾಖೆ ಸೇವೆಗಳ ಜೊತೆಗೆ ಇನ್ನು ಮುಂದೆ ಗ್ರಾಮೀಣ ಜನರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕಂದಾಯ, ಕಾರ್ಮಿಕ, ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸೇವೆಯನ್ನು ಕೂಡ ಪಡೆದಬಹುದು.

ರಾಜ್ಯದ ಗ್ರಾಮೀಣ ಭಾಗಗಳ ಜನತೆಗೆ ಹೆಚ್ಚಿನ ಅನುಕೂಲ ಒದಗಿಸುವ ನಿಟ್ಟಿನಲ್ಲಿ ನಾಡಕಚೇರಿಗಳಲ್ಲಿ, ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸರ್ಕಾರಿ ಸೇವೆಗಳು ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಲಭ್ಯವಾಗಲಿದೆ.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರು ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳ ಜೊತೆಗೆ ಆದಾಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಹಾಗೂ ಆಧಾರ್ ಸೇವೆಗಳ ಸೌಲಭ್ಯವನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲಿ ರಾಜ್ಯದ ಜನ ಪಡೆಯಬಹುದಾಗಿದೆ.

 

Related posts

ದೇಶದಲ್ಲೇ ಅತ್ಯಂತ ಶುದ್ಧಗಾಳಿ ಇರುವ ರಾಜ್ಯ ಕರ್ನಾಟಕ: ಪಟ್ಟಿಯಲ್ಲಿ ಅಗ್ರಸ್ಥಾನ

ಚಂದ್ರಯಾನ-3 ವಿಕ್ರಮ್ ಯಶಸ್ವಿ ಲ್ಯಾಂಡ್ ಗೆ ಶಾಲಾ ಮಕ್ಕಳಿಂದ ಪೂಜೆ ಪ್ರಾರ್ಥನೆ.

ವಿಪಕ್ಷಗಳು ಸರ್ಕಾರ ಬೀಳಿಸುವ ಚಿಂತನೆ ಬಿಟ್ಟು ಆಡಳಿತ ಪಕ್ಷದೊಂದಿಗೆ ಸಹಕರಿಸಲಿ- ಸಚಿವ ಮಧು ಬಂಗಾರಪ್ಪ