ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸಾಹಿತಿಗಳು ಮತ್ತು ಚಿಂತಕರಿಗೆ ಬೆದರಿಕೆ ಪತ್ರಗಳನ್ನ ಬರೆದಿದ್ದ ಆರೋಪಿ ಅಂದರ್.

ಬೆಂಗಳೂರು: ಲೇಖಕರು, ಚಿಂತಕರು, ಸಾಹಿತಿಗಳಿಗೆ ಬೆದರಿಕೆ ಪತ್ರಗಳನ್ನು ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ಮೂಲದ ಶಿವಾಜಿರಾವ್ ಜಾಧವ್ ಬಂಧಿತ ಆರೋಪಿ.  ಶಿವಾಜಿರಾವ್ ಹಿಂದೂ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದು,  ಶಿವಾಜಿರಾವ್ ನನ್ನ ಸಿಸಿಬಿ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಸಾಹಿತಿಗಳಾದ ಕುಂ.ವೀರಭದ್ರಪ್ಪ, ಬಿ ಎಲ್ ವೇಣು, ಬಂಜಗೇರಿ ಜಯಪ್ರಕಾಶ್, ಬಿ.ಟಿ ಲಲಿತಾ ನಾಯಕ್, ವಸುಂಧರ ಭೂಪತಿ ಅವರಿಗೆ ಬೆದರಿಕೆ ಪತ್ರ ಬರೆದಿದ್ದನು. ರಾಜ್ಯದ ಬೇರೆ ಬೇರೆ ಕಡೆ 8 ಪ್ರಕರಣಗಳು ದಾಖಲಾಗಿದ್ದವು.

ಸದ್ಯ ಸಿಸಿಬಿ ಪೊಲೀಸರು ಶಿವಾಜಿರಾವ್​ ಹಿನ್ನೆಲೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಶಿವಾಜಿರಾವ್​ ಇದುವರೆಗೂ ಏಳು ಪತ್ರಗಳನ್ನು ಬರೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಆರೋಪಿಯನ್ನ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Related posts

ಸಿಎಂ  ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್: ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿ 15 ಸಚಿವರು ಭಾಗಿ.

ದೇಶಪ್ರೇಮ ಬೆಳೆಸುವ ಕಾರ್ಯಕ್ರಮ ಶ್ಲಾಘನೀಯ-ಉದ್ಯಮಿ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ

ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಪೈಪೋಟಿ ಹೆಚ್ಚಳ.