ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ: ಅಂಜುಮನ್ ಸಂಸ್ಥೆ ಅರ್ಜಿ ವಜಾ

ಧಾರವಾಡ, :  ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ  ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವಿಗೆ ತಡೆಯಾಜ್ಞೆ ಕೋರಿ ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್​​ ವಜಾಗೊಳಿಸಿದೆ.

ಈ ಮೂಲಕ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹೈಕೋರ್ಟ್ ಅನುಮತಿ ನೀಡಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಐದು ವರ್ಷಗಳ ಅನುಮತಿಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವು ಪಾಸ್ ಮಾಡಿತ್ತು. ಇದನ್ನು ವಿರೋಧಿಸಿದ ಅಂಜುಮನ್ ಸಂಸ್ಥೆ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವಿಗೆ ತಡೆಯಾಜ್ಞೆ ನೀಡುವಂತೆ ಧಾರವಾಡ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಇಂದು  ಈ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಕೋರ್ಟ್, ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಪಾಲಿಕೆ ಆಯುಕ್ತರಿಗೆ ಅರ್ಜಿ ಸಲ್ಲಿಸಿ ಎಂದು ಸೂಚನೆ ನೀಡಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ 3 ದಿನ ಗಣೇಶಮೂರ್ತಿ ಪ್ರತಿಷ್ಟಾಪನೆಗೆ ಅವಕಾಶ ನೀಡಲಾಗಿದೆ. ಅನುಮತಿ ಸಿಗುತ್ತಿದ್ದಂತೆ ಹಿಂದೂಪರ ಸಂಘಟನಾ ಕಾರ್ಯಕರ್ತರು ಪಾಲಿಕೆ ಎದುರು ಗಣೇಶಮೂರ್ತಿ ಹೊತ್ತಿ ಸಂಭ್ರಮಿಸಿದರು.

Related posts

ಶೀಘ್ರದಲ್ಲೇ 6 ಸಾವಿರ ಪೊಲೀಸ್ ಹುದ್ದೆ ನೇಮಕಾತಿ..

ಯುವಸಮೂಹದಲ್ಲಿ ಮಾನಸಿಕ ಗೊಂದಲವೇ ಹೆಚ್ಚು- ಶಿಕ್ಷಣ ತಜ್ಞ ಸಮನ್ವಯ ಕಾಶಿ ಅಭಿಮತ

ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ತಮ್ಮ ಸಿದ್ಧಾಂತಕ್ಕೆ ಪೂರಕವಾಗಿರಲಿ ಎಂಬ ಆರಗ ಜ್ಞಾನೇಂದ್ರ ಪ್ರತಿಪಾದನೆ ಅತ್ಯಂತ ದೌರ್ಭಾಗ್ಯ-ಪಡುವಳ್ಳಿ ಹರ್ಷೇಂದ್ರಕುಮಾರ್