ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸೆ. 4ರಂದು ಬರಪೀಡಿತ ತಾಲೂಕುಗಳ ಘೋಷಣೆ.

ಬೆಂಗಳೂರು: ಸೆಪ್ಟೆಂಬರ್ 4ರಂದು ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ, ಯಾವ ಯಾವ ತಾಲ್ಲೂಕುಗಳು ಬರ ಘೋಷಣೆಗೆ ಅರ್ಹವಾಗುತ್ತವೆ ಎನ್ನುವುದನ್ನು ಗುರುತಿಸಿ ಅಧಿಕೃತವಾಗಿ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್.4ರಂದು ಸಚಿವ ಸಂಪುಟ ಉಪ ಸಮಿತಿಯ ಸಭೆಯನ್ನು ನಡೆಸಲಾಗುತ್ತಿದೆ. ಆ ಸಭೆಯಲ್ಲಿ ಎಷ್ಟು ತಾಲ್ಲೂಕುಗಳು ಬರಪೀಡಿತ ಎನ್ನುವುದನ್ನು ಅಂತಿಮಗೊಳಿಸಿ ಪ್ರಕಟಿಸಲಾಗುತ್ತದೆ ಎಂದಿದ್ದಾರೆ.

ಬರಪೀಡಿತ ತಾಲೂಕುಗಳ ಘೋಷಣೆಯ ನಂತ್ರ, ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆಯೂ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗುವುದು. ಆ ಬಗ್ಗೆ ವಾರದೊಳಗೆ ಕೇಂದ್ರಕ್ಕೆ ಮನವಿಯನ್ನೂ ಸಲ್ಲಿಸಲಾಗುತ್ತದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ ರಾಜ್ಯದ 113 ತಾಲ್ಲೂಕುಗಳನ್ನು ಬರಪೀಡಿತ ಎಂದು ಈಗಾಗಲೇ ಗುರಿತಿಸಲಾಗಿದೆ.

Related posts

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳ: ಈ ರೀತಿ ಲಕ್ಷಣಗಳು ಕಂಡುಬಂದ್ರೆ ವೈದ್ಯರನ್ನ ಸಂಪರ್ಕಿಸಿ..

ನಮ್ಮೂರ ಶಿವಮೊಗ್ಗ ದಸರಾ: ಮಕ್ಕಳ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಗಳಿಗೆ ಚಾಲನೆ.

ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲ-ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್