ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇಂದು ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ  ಘೋಷಣೆ.

ನವದೆಹಲಿ: ಇಂದು ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ದಿನಾಂಕ ನಿಗದಿ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ಐದು ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಇಂದು ಭಾರತೀಯ ಚುನಾವಣಾ ಆಯೋಗವು ಘೋಷಣೆ ಮಾಡಲಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯನ್ನು ಕರೆದಿದ್ದು, ಈ ವೇಳೆ ಮತದಾನದ ದಿನಾಂಕ, ಹಂತಗಳ ಸಂಖ್ಯೆ ಮತ್ತು ನಾಮಪತ್ರಗಳನ್ನು ಸಲ್ಲಿಸುವ ಮತ್ತು ಹಿಂತೆಗೆದುಕೊಳ್ಳುವ ದಿನಾಂಕಗಳನ್ನು ಪ್ರಕಟಿಸಲಿದೆ ಎಂದು ಹೇಳಿದೆ.

ಈ ಐದು ರಾಜ್ಯಗಳಲ್ಲಿನ ಶಾಸಕಾಂಗ ಸಭೆಗಳ ಅವಧಿಯು ಡಿಸೆಂಬರ್ 2023 ಮತ್ತು ಜನವರಿ 2024 ರ ನಡುವೆ ಮುಕ್ತಾಯಗೊಳ್ಳಲಿದೆ.

Related posts

ಸರ್ಕಾರ ಮತ್ತು ಸಿಎಂ ಸಿದ್ಧರಾಮಯ್ಯ ಬಗ್ಗೆ ಹಗುರ ಮಾತು ತರವಲ್ಲ- ಬಿ.ಕೆ ಹರಿಪ್ರಸಾದ್ ವಿರುದ್ಧ ಎಸ್.ಪಿ. ಶೇಷಾದ್ರಿ ಅಸಮಾಧಾನ.

ಹಿಂದೂ ಸಮಾಜ ತಿರುಗಿ ಬಿದ್ದರೆ ಗತಿ ಏನು ಎಂದು ಮುಸ್ಲಿಂ ಸಮಾಜ ಯೋಚಿಸಿಲ್ಲ-ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಗುಡುಗು.

ಮೌಲ್ಯಾಂಕನ ವಿಶ್ಲೇಷಣೆ ಬಿಡುಗಡೆ: ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್..!