ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಇನ್ನೂ 10 ಲಕ್ಷ ಮಹಿಳೆಯರಿಗೆ ಸಿಗದ ಗೃಹಲಕ್ಷ್ಮೀ ಭಾಗ್ಯ

ಬೆಂಗಳೂರು :  ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ  ಜಾರಿಗೆ ಬಂದು ಎರಡು ತಿಂಗಳು ಕಳೆದಿದೆ. ಆದರೆ  ಕರ್ನಾಟಕದಲ್ಲಿ 10 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಭಾಗ್ಯ ಇನ್ನೂ ಸಿಕ್ಕಿಲ್ಲ.

ಹೌದು, ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದವರ ಪೈಕಿ ಇದುವರೆಗೆ ಒಟ್ಟು 9,44,155 ಅರ್ಜಿದಾರರ ಬ್ಯಾಂಕ್ ಖಾತೆಗೆ ಇನ್ನೂ ಹಣ ಜಮೆ ಆಗಿಲ್ಲ. ಅದರಲ್ಲೂ 3082 ಅರ್ಜಿದಾರರು ಮೃತಪಟ್ಟಿದ್ದು, ಅವರ ಹೆಸರಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂತಹ ಅರ್ಜಿಗಳು ಅನರ್ಹವಾಗಿವೆ.

ಇನ್ನು 1,59,356 ಅರ್ಜಿದಾರರ ಆಧಾರ್ ಮತ್ತು ಬ್ಯಾಂಕ್ ಖಾತೆಗೆ ನೀಡಿರುವ ಹೆಸರಿನಲ್ಲಿ ವ್ಯತ್ಯಾಸಗಳು ಕಂಡು ಬಂದಿವೆ. ಇನ್ನು 5,96,268 ಫಲಾನುಭವಿಗಳು ತಮ್ಮ ಖಾತೆಯನ್ನು ಆಧಾರ್ ಜೊತೆಗೆ ಲಿಂಕ್ ಮಾಡಿಲ್ಲ. ಇನ್ನು ಅರ್ಜಿದಾರರ ಪೈಕಿ 1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವಿಭಿನ್ನವಾಗಿದೆ.

ಹೀಗಾಗಿ ನಾನಾ ಕಾರಣಗಳಿಂದಾಗಿ ಕರ್ನಾಟಕ ರಾಜ್ಯದ ಸುಮಾರು 9.44 ಲಕ್ಷಕ್ಕೂ ಅರ್ಜಿದಾರರಿಗೆ ಇನ್ನೂ ಗೃಹಲಕ್ಷ್ಮೀ ಯೋಜನೆಯ ಲಾಭ ಸಿಕ್ಕಿಲ್ಲ. ಅಲ್ಲದೇ ಹಲವು ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯಲ್ಲಿ ಯಾವುದೇ ದೋಷಗಳಿಲ್ಲ. ಆದರೂ ಆದರೂ ಕೂಡ ಅಂತಹ ಗೃಹಿಣಿಯರ ಖಾತೆಗಳಿಗೆ 2000 ರೂಪಾಯಿಯನ್ನು ವರ್ಗಾವಣೆ ಮಾಡಿಲ್ಲ.

ಜುಲೈ ತಿಂಗಳಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿಯನ್ನು ಆರಂಭಿಸಲಾಗಿತ್ತು. ಆದರೆ ಆರಂಭದಿಂದಲೂ ಗೃಹಿಣಿಯರು ಅರ್ಜಿಸಿದ ಬಳಿಕ ಒಂದಿಲ್ಲೊಂದು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಲೇ ಇದೆ. ಕೆಲವರು ಎರಡು ಮೂರು ಬಾರಿ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಆದರೆ ರಾಜ್ಯ ಸರಕಾರ ಈ ಕುರಿತು ಸ್ಪಷ್ಟನೆಯನ್ನು ನೀಡಿದೆ. ಯಾವ ಕಾರಣಕ್ಕೆ ಈ ಬಾರಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಗೃಹಿಣಿಯರು ಪಡೆಯಲು ಸಾಧ್ಯವಾಗಿಲ್ಲೆ ಎಂಬ ಮಾಹಿತಿಯನ್ನು ನೀಡಿದೆ. ಕರ್ನಾಟಕದಲ್ಲಿ ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಎರಡು ತಿಂಗಳ ಹಣವನ್ನು ಜಮೆ ಮಾಡಲಾಗಿದೆ.

ಪಡಿತರ ಚೀಟಿಯಲ್ಲಿನ ಲೋಪದೋಷಗಳನ್ನು ಪರಿಹಾರ ಮಾಡಿಕೊಳ್ಳುವ ಸಲುವಾಗಿ ರಾಜ್ಯ ಸರಕಾರ ಹಲವು ಬಾರಿ ಅವಕಾಶಗಳನ್ನು ನೀಡಿದೆ. ಆದರೆ ಕೆಲವು ಮಹಿಳೆಯರು ಲೋಪದೋಷಗಳನ್ನು ಸರಿಪಡಿಸಿಕೊಂಡಿಲ್ಲ. ಇನ್ನೂ ಕೆಲವು ಮಹಿಳೆಯರು ಸರಿಯಾದ ಅರ್ಜಿ ಸಲ್ಲಿಕೆ ಮಾಡಿದ್ರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ ಅನ್ನೋ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

 

Related posts

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ವರ್ಗಾವಣೆ ಮಾಡಿದ ಸರ್ಕಾರ

ಹೆಚ್ಚು ಹೊತ್ತು ಒಂದೇ ಕಡೆ ಕುಳಿತು ಕೆಲಸ ಮಾಡ್ತೀರಾ. ಹಾಗಾದ್ರೆ ಇರಲಿ ಎಚ್ಚರ..

ಕರಾಟೆ ಪಂದ್ಯಾವಳಿ – 2023: ಪ್ರೀತಮ್ .ವಿ ಮತ್ತು ಶೀತಲ್ ಗೆ ಪ್ರಥಮ ಸ್ಥಾನ.