ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ/ ಹೊಲಿಗೆ ತರಬೇತಿ ನೀಡಲು ಆಸಕ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ
ಶಿವಮೊಗ್ಗ,  : ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನಿಸಲಾಗಿದೆ.
ಪುರುಷ ಒಟ್ಟು 115 ಮತ್ತು ಮಹಿಳೆ 07 ಸ್ಥಾನಗಳಿಗೆ ಅರ್ಜಿಗಳನ್ನು ದಿ: 25-08-2023 ರಿಂದ 10-09-2023 ರೊಳಗೆ ಸಲ್ಲಿಸಬಹುದು. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.
ಶಿವಮೊಗ್ಗದಲ್ಲಿ ಪುರುಷ 29, ಮಹಿಳೆ 05 ಸಂಪರ್ಕಿಸಬೇಕಾದ ಘಟಕಾಧಿಕಾರಿ ಜಿ.ಇ.ಶಿವಾನಂದಪ್ಪ ಮೊ.ಸಂ: 9880705966. ಹಾರನಹಳ್ಳಿ ಪುರುಷ 07 ಘಟಕಾಧಿಕಾರಿ ಸಿ.ಮಧು 9686631428. ಭದ್ರಾವತಿ ಪುರುಷ 14, ಮಹಿಳೆ 02 ಘಟಕಾಧಿಕಾರಿ ಜಗದೀಶ್ 9900283490. ಹೊಳೆಹೊನ್ನೂರು ಪುರುಷ 07 ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ 8105840345. ತೀರ್ಥಹಳ್ಳಿ ಪುರುಷ 10, ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ 9535388472. ಸಾಗರ ಪುರುಷ 03 ಘಟಕಾಧಿಕಾರಿ ಎಂ.ರಾಘವೇಂದ್ರ 9632614031. ಜೋಗ ಪುರುಷ 04 ಘಟಕಾಧಿಕಾರಿ ಡಿ.ಸಿದ್ದರಾಜು 9449699459. ಆನಂದಪುರ ಪುರುಷ 07 ಘಟಕಾಧಿಕಾರಿ ಎಂ.ರಾಘವೇಂದ್ರ 9632614031. ಶಿಕಾರಿಪುರ ಪುರುಷ 04 ಡಾ.ಸಂತೋಷ್ ಎಸ್ ಶೆಟ್ಟಿ 9845402789. ಶಿರಾಳಕೊಪ್ಪ ಪುರುಷ 05 ಘಟಕಾಧಿಕಾರಿ ಸೈಯದ್ ಇಸಾಕ್ 8861492078. ಹೊಸನಗರ ಪುರುಷ 10 ಘಟಕಾಧಿಕಾರಿ ಕೆ.ಅಶೋಕ್ 9241434669. ರಿಪ್ಪನ್‍ಪೇಟೆ ಪುರುಷ 03 ಘಟಕಾಧಿಕಾರಿ ಟಿ.ಶಶಿಧರಾಚಾರ್ಯ 9741477689. ಸೊರಬ ಪುರುಷ 08 ಘಟಕಾಧಿಕಾರಿ ಬಿ.ರೇವಣಪ್ಪ 9945066084.
ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು. 19 ವರ್ಷ ಮೇಲ್ಪಟ್ಟು 45 ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ/ಆರೋಪ ಅಥವಾ ಅಪರಾಧಿ ಎಂದು ನಿರ್ಣಯಿಸಲಾಗಿರದಿದ್ದಲ್ಲಿ/ದಾಖಲಾಗಿರದಿದ್ದಲ್ಲಿ ಅಂತಹವರು ಹಾಗೂ ಘಟಕ ಇರುವ ಸ್ಥಳದಿಂದ ಸುಮಾರು 8 ರಿಮದ 12 ಕಿ.ಮೀ ಅಂತರದಲ್ಲಿರುವವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗೃಹರಕ್ಷಕದಳಜಿಲ್ಲಾ ಗೌರವ ಸಮಾದೇಷ್ಟರಾದ ಚಂದನ್ ಪಟೇಲ್ ಎಂ ಪಿ ತಿಳಿಸಿದ್ದಾರೆ.

ಹೊಲಿಗೆ ತರಬೇತಿ ನೀಡಲು ಆಸಕ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಶಿವಮೊಗ್ಗ :  2023-24 ನೇ ಸಾಲಿನ ಜಿಲ್ಲಾ ವಲಯದ ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ ಕಾರ್ಯಕ್ರಮದಡಿ ಬೇಸಿಕ್ ಹೊಲಿಗೆ ತರಬೇತಿಯನ್ನು ನೀಡಲು ಆಸಕ್ತ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉಪನಿರ್ದೇಶಕರು(ಗ್ರಾಕೈ ರವರ ಕಚೇರಿ) ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಕೈಗಾರಿಕೆ ಇಲಾಖೆಯಿಂದ 120 ಫಲಾನುಭವಿಗಳಿಗೆ ಜಿಲ್ಲೆಯ ವ್ಯಾಪ್ತಿಗೊಳಪಡುವ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ 270 ಗಂಟೆಗಳ ಅವಧಿಯ ಬೇಸಿಕ್ ಹೊಲಿಗೆ ತರಬೇತಿಯನ್ನು ಆಯಾ ತಾಲ್ಲೂಕಿನ ನಿರ್ದಿಷ್ಟಪಡಿಸಿದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.
ಆದ್ದರಿಂದ ನಿರ್ದಿಷ್ಟಪಡಿಸಿದ ಗ್ರಾ.ಪಂ ವ್ಯಾಪ್ತಿಯಲ್ಲಿ ತರಬೇತಿ ನೀಡಲು ಆಸಕ್ತ ಅರ್ಹ ಸಂಸ್ಥೆಗಳು ಷರತ್ತಗಳಿಗೆ ಒಳಪಟ್ಟು ದಿನಾಂಕ: 01-09-2023 ರೊಳಗೆ ಕೈಗಾರಿಕೆ ಮತತು ವಾಣಿಜ್ಯ ಇಲಾಖೆ, ಗ್ರಾಮೀಣ ಕೈಗಾರಿಕೆ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಮುದ್ದಾಂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಉಪನಿರ್ದೇಕರು(ಗ್ರಾಕೈ ರವರ ಕಚೇರಿ) ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಕೈಗಾರಿಕೆ ಇಲಾಖೆ, ಜಿಲ್ಲಾಪಂಚಾಯತ್, 3ನೇ ಮಹಡಿ, ಶಿವಪ್ಪನಾಯಕ ಕಚೇರಿ ಸಂಕೀರ್ಣ, ನೆಹರೂ ರಸ್ತೆ, ಶಿವಮೊಗ್ಗ, ದೂ.ಸಂ: 08182-223376 ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಉಪನಿರ್ದೇಶಕರು(ಗ್ರಾಕೈ) ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ
ಶಿವಮೊಗ್ಗ,  : 2023-24 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರ ತಾಕಿನಲ್ಲಿ ಹನಿ ನೀರಾವರಿ ಅಳವಡಿಕೆಗಾಗಿ ಭದ್ರಾವತಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೇ.75 ರಷ್ಟು ಸಾಮಾನ್ಯ ವರ್ಗದ ರೈತರಿಗೆ ಹಾಗೂ ಶೇ.90 ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶೀಷ್ಟ ಪಂಗಡದ ರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಸೌಲಭ್ಯ ಮತ್ತು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಗುಲಾಬಿ, ಸುಗಂಧರಾಜ, ಅಂಗಾಂಶ ಬಾಳೆ, ಕಾಳುಮೆಣಸು, ಕೋಕೋ ಬೆಳೆಗಳ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಮಿನಿ ಟ್ರ್ಯಾಕ್ಟರ್, ಪ್ರಾಥಮಿಕ ಸಂಸ್ಕರಣ ಘಟಕ, ಅಡಿಕೆ ದೋಟಿ, ಅಡಿಕೆ ಸುಲಿಯುವ ಯಂತ್ರ ಸಹಾಯಧನ ಸೌಲಭ್ಯವಿರುತ್ತದೆ.
ಆಸಕ್ತ ರೈತರು ಸೆ.21 ರೊಳಗಾಗಿ ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್, ಬ್ಯಾಂಕ್ ಖಾತೆ ಜೆರಾಕ್ಸ್, ಪಾಸ್ ಪೆÇೀರ್ಟ್ ಸೈಜ್ ಫೆÇೀಟೋ ಮತ್ತು ಜಾತಿ ಪ್ರಮಾಣ ಪತ್ರಗಳೊಂದಿಗೆ ಭದ್ರಾವತಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಗೆ ಅರ್ಜಿಯನ್ನು ಸಲ್ಲಿಬಹುದೆಂದು ಭದ್ರಾವತಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ
ಶಿವಮೊಗ್ಗ, :
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಪ್ರೋತ್ಸಾಹಿಸಲು 2023-24 ನೇ ಸಾಲಿನ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವಂತಹ 5 ರಿಂದ 8 ವರ್ಷದೊಳಗಿನ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು ರೂ.10,000 ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
2023-24 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿ: 15-09-2023 ರೊಳಗೆ ಈ ಕಚೇರಿಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Related posts

ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ’ನವರಾತ್ರಿ’ ಗಿಫ್ಟ್ : ಎರಡು ತಿಂಗಳ ಹಣ ಒಟ್ಟಿಗೆ ಜಮಾ..!

ತಂಬಾಕು ಸೇವೆನೆಯಿಂದ ಲಕ್ಷಾಂತರ ಜನರ ಸಾವು-ಹೇಮಂತ್ ರಾಜ್ ಅರಸ್

ಶಿಸ್ತು ಉಲ್ಲಂಘನೆ ಆರೋಪ: ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ ಯೋಗೇಶ್ ರಿಗೆ ಶೋಕಾಸ್ ನೋಟೀಸ್