ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ.

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾದ ನಂತರ ಹಿರಿಯ ನಾಯಕರನ್ನ ಭೇಟಿಯಾಗುತ್ತಿರುವ ಬಿವೈ ವಿಜಯೇಂದ್ರ ಅವರು ಇದೀಗ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪದ್ಮನಾಭನಗರದಲ್ಲಿರುವ ಹೆಚ್​.ಡಿ.ದೇವೇಗೌಡರ ನಿವಾಸದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ಬಿವೈ ವಿಜಯೇಂದ್ರ 20 ನಿಮಿಷದಿಂದ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ರಾಜ್ಯ ರಾಜಕೀಯದ ಬಗ್ಗೆ ವಿಜಯೇಂದ್ರ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದರು.  ಬಳಿಕ ಮಾತನಾಡಿದ್ದ ಬಿವೈ ವಿಜಯೇಂದ್ರ, ಬಸವರಾಜ ಬೊಮ್ಮಾಯಿ ಆಶೀರ್ವಾದ ಹಾಗೂ ಮಾರ್ಗದರ್ಶನ ಕೇಳಿದ್ದೇನೆ. ವರಿಷ್ಠರು ಒಳ್ಳೇ ನಿರ್ಧಾರ ಮಾಡಿದ್ದಾರೆ ಎಂದು ಸಂತೋಷಪಟ್ಟರು. ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ನಾನಷ್ಟೇ ಅಲ್ಲ, ಎಲ್ಲಾ ಹಿರಿಯರು ನಿನ್ನ ಜತೆ ಇರುತ್ತೇವೆ ಎಂದಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ. ಪ್ರವಾಸ ಮಾಡಿ ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡೋಣ ಎಂದು ಬೊಮ್ಮಾಯಿ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.

Related posts

ರಾಜ್ಯದಲ್ಲಿ 2028ಕ್ಕೆ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ- ಡಿಸಿಎಂ ಡಿಕೆ ಶಿವಕುಮಾರ್ .

ವಿಧಾನಪರಿಷತ್ ನೈರುತ್ಯ ಕ್ಷೇತ್ರದ ಚುನಾವಣೆ: ಮತದಾರರ ನೋಂದಣಿ ಅಭಿಯಾನಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ.

ಮಕ್ಕಳ ದಸರಾ – ರಾಜ್ಯಮಟ್ಟದ ಕುಡೋ ಮಾರ್ಷಲ್ ಆರ್ಟ್ಸ್ ಪಂದ್ಯಾವಳಿಗಳಿಗೆ ಚಾಲನೆ.