ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ಮುಚ್ಚಿದೆ –ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ಮುಚ್ಚಿದೆ ಎಂದು ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಡಿ.ಕೆ.ಶಿವಕುಮಾರ್​ ಹೇಳಿದರು.

ಕೆಪಿಸಿಸಿ ನೂತನ ಕಟ್ಟಡದಲ್ಲಿ ನಡೆಯುತ್ತಿರುವ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಯೋಗ ಬರುತ್ತದೆ, ಯೋಗಕ್ಕಿಂತ ಯೋಗಕ್ಷೇಮ ಬಹಳ ಮುಖ್ಯ. ಬಂದಿರುವ ಯೋಗವನ್ನು ಕಾಪಾಡಿಕೊಂಡು ಹೋಗಬೇಕು. ಟೀಂ ಎಫರ್ಟ್​​ನಿಂದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದೇವೆ. 224ರ ಪೈಕಿ 218 ಅಭ್ಯರ್ಥಿಗಳಿಗೆ ಒಮ್ಮತದ ಟಿಕೆಟ್ ನೀಡಿದ್ದೆವು. ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂಬುದಷ್ಟೇ ನಮ್ಮ ಗುರಿಯಾಗಿತ್ತು.

ವೈಯಕ್ತಿಕ ಭಿನ್ನಾಭಿಪ್ರಾಯವಿದ್ದರೂ ಕೂಡ ನಾವು ಕೆಲಸ ಮಾಡಿದ್ದೇವೆ. ಹಳೆ ಪದ್ಧತಿಯಲ್ಲೇ ಪಕ್ಷ ನಡೆಯುತ್ತೆ ಅಂತಾ ಕೆಲವರು ಭಾವಿಸಿದ್ದರು. ನನ್ನ ಆಲೋಚನೆ ಇನ್ನೂ ಡೀಪ್ ಆಗಿತ್ತು ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು

Related posts

ಭಾರತೀಯ ವಿದ್ಯಾ ಭವನದಲ್ಲಿ ‘ಗೊಂಬೆ ಹಬ್ಬ’

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯರಿಗೆ ಸನ್ಮಾನ.

ಜನಶಕ್ತಿಯ ಮುಂದೆ ಯಾವುದೇ ಶಕ್ತಿ ನಿಲ್ಲಲಾಗದು : ಜಿ.ಎಸ್.ನಾರಾಯಣರಾವ್