ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ನಿಗಮ- ಮಂಡಳಿ ನೇಮಕ: ಅತಿ ಹಿಂದುಳಿದ ಸಮಾಜಕ್ಕೆ ಆದ್ಯತೆ: ಬಿ.ಕೆ. ಹರಿಪ್ರಸಾದ್ ಅಭಿಮತ….

ಶಿವಮೊಗ್ಗ ಸೆ.6: ನಿಗಮ- ಮಂಡಳಿ ನೇಮಕಾತಿ ಸಂದರ್ಭದಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಆದ್ಯತೆ ನೀಡುವ ಸಂಬಂಧ ಪಕ್ಷದ ಹೈಕಮಾಂಡ್ ಗಮನ ಸೆಳೆಯಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಬಿಕೆ. ಹರಿಪ್ರಸಾದ್ ಭರವಸೆ ನೀಡಿದರು.
ಸೆ.೯ರಂದು ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಸೆ.೬ರ ಇಂದು ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಸಂದರ್ಭದಲ್ಲಿ ಯಾಗ ಕ್ಷತ್ರೀಯ ಸಾಧು ಶೆಟ್ಟಿ ಸಮಾಜ ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಸ್ಥಾನಮಾನ ದೊರೆತಿಲ್ಲ. ಈ ನಿಟ್ಟಿನಲ್ಲಿಯೂ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.
ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ವಿ.ರಾಜು, ಅಶೋಕ್ ಕುಮಾರ್, ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷರು ಮತ್ತು ಕೆಪಿಸಿಸಿ ಸಂಯೋಜಕ ಆರ್. ಮೋಹನ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಾವಿತ್ರಮ್ಮ, ಯಾಗ ಕ್ಷತ್ರೀಯ ಸಾಧು ಶೆಟ್ಟಿ ಸಮಾಜದ ಜಿಲ್ಲಾಧ್ಯಕ್ಷ ಎನ್. ಉಮಾಪತಿ, ಶಿವಾನಂದ, ಸಿಮ್ಸ್ ಶ್ರೀಧರ್, ಮಾಜಿ ಜಿಪಂ ಸದಸ್ಯ ಸುಂದರೇಶ್ ಮತ್ತಿತರರು ಉಪಸ್ಥಿತರಿದ್ದರು.

Related posts

ನ.4ರಂದು  ಶಿವಮೊಗ್ಗ ಆದಿಚುಂಚನಗಿರಿ ಶಾಖಾ ಮಠದ 33 ನೇ ವಾರ್ಷಿಕೋತ್ಸವ,   ಉಪನ್ಯಾಸ- ಸಾಧಕರಿಗೆ ಸನ್ಮಾನ.”

ಗೊಂದಲಗಳನ್ನು ಸರಿಪಡಿಸಿಕೊಳ್ಳದಿದ್ದರೆ ಸರ್ಕಾರಕ್ಕೆ ಕಂಟಕ-ಭವಿಷ್ಯ ನುಡಿದ ಕಾಲಜ್ಞಾನಿ ಕೊಡೇಕಲ್ ಬಸವಣ್ಣ..

ಬಸ್ ಗಾಗಿ ಕಾಯುತ್ತಾ ರಸ್ತೆ ಬದಿ ನಿಂತಿದ್ಧ ವಿದ್ಯಾರ್ಥಿಗಳಿಗೆ ಖಾಸಗಿ ಬಸ್ ಡಿಕ್ಕಿ: ಓರ್ವ ವಿದ್ಯಾರ್ಥಿನಿ ಸಾವು.