ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯಬಿಜೆಪಿಗೆ ನೂತನ ಸಾರಥಿ: ಕಮಲ ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ.

ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ಸಾರಥಿ ಕೊನೆಗೂ ನೇಮಕವಾಗಿದ್ದಾರೆ.   

ಹೌದು, ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.      ಈ ಮೂಲಕ ಲಿಂಗಾಯತ ಸಮುದಾಯಕ್ಕೆ ಮಣೆ ಹಾಕಲಾಗಿದೆ.

ಈ ಮೂಲಕ ಬಿಜೆಪಿಯಲ್ಲಿ ಮತ್ತೆ ಮಾಜಿ ಸಿಎಂ ಯಡಿಯೂರಪ್ಪ ಅಧಿಪತ್ಯ ಸಾಧಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ ಸದ್ಯ ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಭಾರೀ ಕುತೂಹಲ ಮೂಡಿಸಿತ್ತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಕರ್ನಾಟಕ ಬಿಜೆಪಿಯ ಅಧ್ಯಕ್ಷರಾಗುವುದು ಬಹುತೇಕ ಎಂದು ಹಿಂದೆ ಹೇಳಲಾಗುತ್ತಿತ್ತು. ಆದರೆ ಇದೀಗ ಬಿವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

 

Related posts

ಕಾವೇರಿ ನದಿ ನೀರಿಗೆ ತಮಿಳುನಾಡು ಕ್ಯಾತೆ: ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ ಕರ್ನಾಟಕ

ನಾಳೆ ಇಸ್ರೋಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಬೆಂಗಳೂರಿನಲ್ಲಿ ಮಾರ್ಗ ಬದಲಾವಣೆ.

ಮೊರಾಕೊದಲ್ಲಿ ಪ್ರಬಲ ಭೂಕಂಪನದಿಂದ 296 ಮಂದಿ ಸಾವು: ಪ್ರಧಾನಿ ಮೋದಿ ಸಂತಾಪ.