ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮಹಿಳೆಯರ ಸ್ವಾವಲಂಬಿ ಬದುಕಿಗೆ ಗೃಹಲಕ್ಷ್ಮಿ ಆಸರೆ- ಗ್ರಾಪಂ ಅಧ್ಯಕ್ಷೆ ಚೈತ್ರ ಮೋಹನ್

ಶಿವಮೊಗ್ಗ: ಕುಟುಂಬ ನಿರ್ವಹಣೆಯ ಹೊಣೆ ಹೊತ್ತ ರಾಜ್ಯದ ಒಂದು ಕೋಟಿಗೂ ಅಧಿಕ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ, ಬೆಲೆ ಏರಿಕೆಯ ಸಂಕಷ್ಟಗಳ ನಡುವೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು, ಅವರ ಕನಸನ್ನು ನನಸಾಗಿಸಲು ಗೃಹಲಕ್ಷ್ಮಿ ಯೋಜನೆ ಆಸರೆಯಾಗಲಿದೆ ಎಂದು ಹಸೂಡಿ ಗ್ರಾಪಂ ಅಧ್ಯಕ್ಷೆ ಚೈತ್ರ ಕೆ.ಆರ್. ಮೋಹನ್ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಹಸೂಡಿ ಗ್ರಾಪಂ ವತಿಯಿಂದ ಮೈಸೂರಿನಲ್ಲಿ ಲೋಕಾರ್ಪಣೆಗೊಳ್ಳಲಿರುವ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ನಾಲ್ಕನೇ ಗ್ಯಾರಂಟಿಯಾದ ಕುಟುಂಬದ ಒಡತಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮದ ವೀಕ್ಷಣೆಯನ್ನು ಆ.30ರ ಇಂದು ಬೆಳಿಗ್ಗೆ ಹಸೂಡಿಯ ರಂಗಮಂದಿರದ ಆವರಣದಲ್ಲಿ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಅವರು ಮಾತನಾಡಿದರು.

ಗೃಹಲಕ್ಷ್ಮಿ ಯೋಜನೆ ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆಯಾಗಿದೆ. ನಿರ್ವಹಣೆಯಲ್ಲಿ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಆಕ ಆರ್ಥಿಕವಾಗಿ ಸಬಲವಾದಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಿಂದ ಕೂಡಿರುತ್ತದೆ ಎಂದರು. ಗೃಹಲಕ್ಷ್ಮಿ ಯೋಜನೆಗೆ ಜಿಲ್ಲೆಯಲ್ಲಿ 423,570 ಅರ್ಹ ಫಲಾನುಭವಿಗಳಿದ್ದು, 3,60,294 ನೋಂದಣಿ ಮಾಡಿಸಿಕೊಂಡಿದ್ದಾರೆ. ಇಂದೇ ನೋಂದಾಯಿತ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ 2 ಸಾವಿರ ರೂ. ನೇರವಾಗಿ ವರ್ಗಾವಣೆಯಾಗಲಿದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗಾಗಿ 17,500 ಕೋಟಿ ಮೀಸಲಿಡಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆ ನೋಂದಣಿಯಲ್ಲಿ 14ನೇ ಸ್ಥಾನದಲ್ಲಿದ್ದು ಶೇ. 85.06ರಷ್ಟು ಗುರಿ ಸಾಧಿಸಲಾಗಿದೆ. ಜಿಲ್ಲೆಯ ಎಲ್ಲಾ ಮಹಿಳೆಯರೂ ಈ ಯೋಜನೆಯ ಪ್ರಯೋಜನ ಪಡೆದು ಫಲಾನುಭವಿಗಳ ನೋಂದಣಿ ಪಟ್ಟಿಯಲ್ಲಿ ಜಿಲ್ಲೆಯು ರಾಜ್ಯದಲ್ಲಿಯೇ ಮೊದಲ ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ಪಡೆಯಲಿ ಎಂದು ಆಶಿಸಿದರು.

ಗ್ರಾಪಂ ಸದಸ್ಯರುಗಳಾದ ಯುವರಾಜ್‌ ಬಿ., ಸಂಜಯ್‌ ಕುಮಾರ್ ಕೆ.. ಉಷಾ ಕೆ.. ಫಸಿಹಾಬಾನು, ಮುನಿಯಮ್ಮ, ಶಾಂತಮ್ಮ, ಹೇಮ, ಶ್ರೀನಿವಾಸ್‌ ಹೆಚ್.ಎ. ಶರತ್ ಹೆಚ್.ಎ. ವೆಂಕಟೇಶ್ ಸಿ., ಜಯಲಕ್ಷ್ಮಿ, ಕೆಪಿಸಿಸಿ ಸಂಯೋಜಕ, ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾ‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಮೋಹನ್ ಆ‌.. ಪಿಡಿಓ ರಾಜಪ್ಪ ಹೆಚ್., ಕಂದಾಯ ನಿರೀಕ್ಷಕ ವಿಜಯ್‌ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಜೆಸಿಐ ಶಿವಮೊಗ್ಗ ಭಾವನದ ವತಿಯಿಂದ ರಕ್ತದಾನ , ನೇತದಾನ ಹಾಗೂ ದೇಹ ದಾನ ಶಿಬಿರ

ದೀಪಾವಳಿ ಹಬ್ಬದ ಎಫೆಕ್ಟ್ : ವಾಯುಮಟ್ಟ ಸೂಚ್ಯಂಕದಲ್ಲಿ ಹೆಚ್ಚಳ.

ಅಡಿಕೆಹಾಳೆ ಉತ್ಪನ್ನಗಳಿಗೆ ಬಿಐಎಸ್ ಪ್ರಮಾಣೀಕರಣ ದೊರತರೆ ಮೌಲ್ಯ ಹೆಚ್ಚುತ್ತದೆ-ಗೋಪಿನಾಥ್