ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ: ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದ 9ನೇ ತರಗತಿ ವಿದ್ಯಾರ್ಥಿನಿ.

ಬೆಂಗಳೂರು: ರೈತರು, ಬಡವರು, ಶ್ರಮಿಕವರ್ಗದ ಏಳಿಗೆಯ ಉದ್ದೇಶವಿಟ್ಟುಕೊಂಡು ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನ ಪಡೆದು ಅಧಿಕಾರಕ್ಕೇರಿರುವ ಕಾಂಗ್ರೆಸ್ ಸರ್ಕಾರ ಇದೀಗ ತಾನು ಕೊಟ್ಟ ಐದು ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಪೂರೈಸುತ್ತಿದೆ. ಜೊತೆ ಜೊತೆಗೆ ರಾಜ್ಯದ ಹಿತಕ್ಕಾಗಿ ಹಲವು ಕಾರ್ಯಕ್ರಮಗಳನ್ನ ಜಾರಿಗೊಳಿಸಲು ಸಜ್ಜಾಗಿರುವ ಕಾಂಗ್ರೆಸ್ ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದಾಳೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಗ್ಯಾರಂಟಿ ಯೋಜನೆಗಳ ಜೊತೆಗೆ ಶಾಲಾ ಮಕ್ಕಳಿಗೆ ಶೂ, ಮೊಟ್ಟೆ ವಿತರಣೆ ಮುಂದುವರೆಸಿದೆ.  2021 ರಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಂದನೇ ತರಗತಿಯಿಂದ ಎಂಟನೇ ತರಗತಿಯವರೆಗೆ  ಮೊಟ್ಟೆ ವಿತರಣೆಯನ್ನು ಮಾಡುತ್ತಿತ್ತು. ಬಳಿಕ ಸರ್ಕಾರ ಒಂದು ಸಮೀಕ್ಷೆಯನ್ನು ಮಾಡಿದ ಮೇಲೆ ಶೇಕಡಾ 70 ರಷ್ಟು ಮಕ್ಕಳು ಮೊಟ್ಟೆ ಬೇಕು ಎಂದು ತಿಳಿಸಿದರು. ಇದಾದ ಮೇಲೆ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಎರಡು ದಿನ ಮೊಟ್ಟೆ ವಿತರಣೆ ಮಾಡಲು ಸೂಚಿಸಲಾಯಿತು. ಇದಾದ ಬಳಿಕ ಪೋಷಕರು ಒಂಭತ್ತು ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಸರ್ಕಾರ ಒಂದರಿಂದ ಹತ್ತನೇ ತರಗತಿಯವರೆಗೂ ಮೊಟ್ಟೆ ವಿತರಣೆ ವಿಸ್ತರಿಸಿತು. ಇದೀಗ ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿನಿಯೋರ್ವಳು ಸಿಎಂ ಗೆ ಅಭಿನಂದನೆ ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕುಂಕೂರು ಗ್ರಾಮದ ಸರ್ಕಾರಿ ಫ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್ ಅವರು ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ‘ನೀವು ಜಾರಿಗೆ ತಂದಂತಹ ಅನೇಕ ಯೋಜನೆಗಳು ರಾಜ್ಯದ ಅನೇಕ ಕುಟುಂಬಗಳಿಗೆ ವರದಾನವಾಗುತ್ತಿದೆ. ವಿಶೇಷವಾಗಿ ಕ್ಷೀರಭಾಗ್ಯ, ಶೋಭಾಗ್ಯ ಜೊತೆಗೆ ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸುವ ದೃಷ್ಟಿಯಿಂದ ಒಂದರಿಂದ ಹತ್ತನೆ ತರಗತಿಯವರೆಗೆ ಮೊಟ್ಟೆ ವಿತರಣೆ ಅತ್ಯುತ್ತಮ ಯೋಜನೆಯಾಗಿದೆ ಎಂದು ಸಿದ್ದರಾಮಯ್ಯನವರ ಯೋಜನೆಯನ್ನು ಶ್ಲಾಘೀಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ಧರಾಮಯ್ಯ, ‘ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ. ನಮ್ಮ ಈ ವಿದ್ಯಾರ್ಥಿಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ ಪುಟ್ಟ ಬಾಲಕಿಯೊಬ್ಬಳು ನನಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ.

ಅಷ್ಟೇ ಮಾತ್ರವಲ್ಲ, ಇಂತಹ ಕಾರ್ಯಕ್ರಮಗಳನ್ನು ನೀಡುತ್ತಿರುವ ತಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಕ್ಕರೆಯಿಂದ ಸಲಹೆ ನೀಡಿದ್ದಾಳೆ. ಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು. ಇಂಥ ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಾಂತಿ, ಸೌಹಾರ್ದತೆಯ ಸಮೃದ್ಧ ಕರ್ನಾಟಕ ನಿರ್ಮಾಣದ ನನ್ನ ಸಂಕಲ್ಪಕ್ಕೆ ಈ ದಿನ ಬಲ ಬಂದಿದೆ ಎಂದು ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

 

Related posts

ನಾಳೆ ಆಕಾಶದಲ್ಲಿ ಕಾಣಲಿದೆ ಅಪರೂಪದ ಸೂಪರ್ ಬ್ಲೂ ಮೂನ್.

ಅಪರಾಧ ಹಿನ್ನಲೆಯುಳ್ಳ ವ್ಯಕ್ತಿಗೆ ಟಿಕೆಟ್ ನೀಡಿದ್ರೆ ಪತ್ರಿಕೆಯ ಮೂಲಕ ಕಾರಣ ನೀಡಬೇಕು- ಕೇಂದ್ರ ಚುನಾವಣಾ ಆಯೋಗ

ನ.1ರಂದು ಕರ್ನಾಟಕ ಸಂಭ್ರಮ-50: ಕೆಂಪು ಹಳದಿ ಬಣ್ಣದ ರಂಗೋಲಿ ಬಿಡಿಸಿ, ಗಾಳಿಪಟ ಹಾರಿಸಿ…