ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಕ್ರೆಬೈಲು ಆನೆ ಬಿಡಾರದಲ್ಲಿ ಸ್ವಚ್ಛತಾ  ಸೇವಾ ಅಭಿಯಾನ .

ಶಿವಮೊಗ್ಗ:  ಸ್ವಚ್ಛತಾ ಹಿ ಸೇವಾ ಅಭಿಯಾನದ ಅಡಿಯಲ್ಲಿ ದಿನಾಂಕ : 27-09-2023 ರಂದು ಆನೆಗಳ ಬಿಡಾರ ಸಕ್ರೈಬೈಲು ಇಲ್ಲಿ ಏರ್ಪಡಿಸಿದ್ದ ಸ್ವಚ್ಛತಾ ಅಭಿಯಾನವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳು ಹಾಗೂ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾದ  ಸ್ನೇಹಲ್ ಸುಧಾಕರ್ ಲೋಖಂಡೆ ಇವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು,  ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರೀಕರ ಆಧ್ಯ ಕರ್ತವ್ಯವಾಗಿದ್ದು, ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವ ಕುರಿತು ಜನಾಂದೋಲನವಾಗಬೇಕಾಗಿದೆ ಹಾಗೂ ಸಾರ್ವಜನಿಕರಿಗೆ ಪ್ಲಾಸ್ಟಿಕ್ ನಿಂದ ಆರೋಗ್ಯದ ಮೇಲೆ, ಪರಿಸದಲ್ಲಿ ವನ್ಯಜೀವಿಗಳ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕಾಗಿದೆ ಎಂದು ತಿಳಿಸಿದರು. ಕುವೆಂಪು ವಿಶ್ವವಿದ್ಯಾಲಯದ ರಾಸೇಯೋ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ ನಾಗರಾಜ ಪರಿಸರ ಇವರು ಮಾತನಾಡಿ ಪ್ಲಾಸ್ಟಿಕ್‍ನ ಅವ್ಯಾಹತ ಬಳಕೆಯಿಂದ ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಹೆಚ್ಚಾಗುತ್ತಿದ್ದು, ಏಕಬಳಕೆಯ ಪ್ಲಾಸ್ಟಿಕ್ ಉತ್ಪತ್ತಿಗೆ ಕಡಿವಾಣ ಹಾಕದಿದ್ದರೆ ಮುಂದಿನದಿನಗಳಲ್ಲಿ ಬಹುದೊಡ್ಡ ಗಂಡಾಂತರವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ನುಡಿಗಳನ್ನಾಡಿದರು. ಏಕಬಳಕೆಯ ಪ್ಲಾಸ್ಟಿಕ್ ನಿಷೇದಿಸಲಾಗಿದ್ದರೂ ಸಹಾ ಉತ್ಪತ್ತಿಯಾಕೆ ಆಗುತ್ತಿದೆ ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ. ಆದ್ದರಿಂದ ಕೂಡಲೆ ಎಲ್ಲರೂ ಎಚ್ಚೆತ್ತುಕೊಂಡು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ವಿ ಎಸ್ ನಾಗರಾಜ್ ಇವರು ಮಾತನಾಡಿ ಎಲ್ಲಾ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸರ್ಕಾರ ಕೂಡಲೆ ನಿಲ್ಲಿಸುವಂತೆ ಆದೇಶ ಹೊರಡಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕೆಂದು ಈ ಸಂದರ್ಭದಲ್ಲಿ ವಿನಂತಿಸಿದರು. ಕಾರ್ಯಕ್ರಮದಲ್ಲಿ ಆರ್ ಎಫ್ ಓ ಶ್ರೀ ವಿನಯ್ ಕುಮಾರ್, ತಾಲೂಕ್ ಪಂಚಾಯತ್ ಸಹಾಯಕ ನಿರ್ದೇಶಕರಾದ ಶ್ರೀ ಲೋಹಿತ್ ಎಸ್, ರವಿ, ರಾಮಚಂದ್ರ, ಮುರಾರ್ಜಿ ಶಾಲೆಯ ಪ್ರಾಂಶುಪಾಲರು ಮತ್ತು ಪಿ ಡಿ ಓ ಶ್ರೀ ಕೃಷ್ಣ ಮೂರ್ತಿ, ಸಿಬ್ಬಂದಿಗಳಾದ ಕುಮಾರ್, ಗೌರಿಶಂಕರ್, ಗಣೇಶ್, ಜಯಂತ್ ಬಾಬು ಶ್ರೀ ಅರುಣ್ ಇನ್ನಿತರ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಬಾರ್ ಅಂಡ್ ರೆಸ್ಟೋರೆಂಟ್ ತೆರವಿಗೆ ಆಗ್ರಹಿಸಿ ಪ್ರತಿಭಟನೆ.

ನನ್ನ ಅನುವಾದಕರಾಗಿರುವುದು ಅತ್ಯಂತ ಅಪಾಯದ ಕೆಲಸ- ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನುಡಿ.

ರೋಗಿಗಳ ಆರೈಕೆ ಮಾಡುತ್ತಿರುವ ಶರಣ್ಯ ಕಾರ್ಯ ಶ್ಲಾಘನೀಯ-ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ