ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗ್ರಾ.ಪಂ ಸೂಪರ್ ಮಾರ್ಕೆಟ್ ಗಳಲ್ಲಿ ಹೊಸ ಮದ್ಯದಂಗಡಿಗಳನ್ನು ತೆರೆಯುವ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಮತ್ತು ಡಿಸಿಎಂ.

ಚಿತ್ರದುರ್ಗ:  ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ, ಮಾಲ್ ಹಾಗೂ ಸೂಪರ್ ಮಾರ್ಕೆಟ್ ಗಳಲ್ಲಿ ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಿಗೆ ಪರವಾನಗಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿತ್ತು. ಆದರೆ ಈ ಕುರಿತು ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ

ಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯುವುದಾಗಿ ಚಿಂತನೆ ನಡೆಸುತ್ತಿರುವುದಾಗಿ ಸಚಿವರು ಹೇಳಿಕೆ  ನೀಡಿದ್ದಾರೆ, ಆದರೆ ನಾವು ತೆರೆಯುವುದಿಲ್ಲ. ನಮ್ಮ ಸರ್ಕಾರ ಹೊಸ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ  ಎಂದು ಸಿಎಂ ಸಿದ್ಧುರಾಮಯ್ಯ ಹೇಳಿದ್ದಾರೆ.

ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲ

ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ, ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಹಾಳು ಮಾಡಿದವರೇ ಬಿಜೆಪಿಯವರು. ಅವರಿಗೆ ಯಾವ ನೈತಿಕತೆ ಇದೆ. ನಮ್ಮ ಕಾಲದಲ್ಲಿ ಯಾವತ್ತೂ ಇಷ್ಟೊಂದು  ಸಾಲ ಮಾಡಿರಲಿಲ್ಲ. ಹಾಗೂ ಈ ಮೊತ್ತದ ಬದ್ಧತೆ ವೆಚ್ಚ ಇರಲಿಲ್ಲ.  ಎಲ್ಲಾ ಹಾಳು ಮಾಡಿ ಈಗ ಹೇಳುತ್ತಾರೆ ಎಂದರು.

ಕಾಂಗ್ರೆಸ್  ಪಕ್ಷದ ಶಾಸಕರೇ ಈ ಆರೋಪ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಹೆಚ್ಚುವರಿ ಅನುದಾನ ದೊರೆಯುತ್ತಿಲ್ಲ ಎಂದು ಹೇಳಿದ್ದಾರೆ. ನಿಯಮಿತ ಅನುದಾನ ದೊರೆಯುತ್ತಿದೆ. ಭದ್ರಾ ಯೋಜನೆಗೆ  200 ಕೋಟಿ ರೂ.ಗಳನ್ನು ಭೂ ಸ್ವಾಧೀನಕ್ಕೆ ನೀಡಲಾಗಿದೆ.  ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲ ಹಾಗೂ ಗ್ಯಾರಂಟಿ ಯೋಜನೆಗಳಿಗೂ ಅನುದಾನದ ಕೊರತೆ ಇಲ್ಲ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಪಡಿಸಿದರು.

ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ?

ಬಿಜೆಪಿ ಸತ್ಯ ಶೋಧನಾ ಸಮಿತಿ ಶಿವಮೊಗ್ಗಕ್ಕೆ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ,  ಸತ್ಯ ಶೋಧನೆ ಮಾಡಲು ಏನಾಗಿದೆ. ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ? ಈದ್-ಮಿಲಾದ್ ಸಂದರ್ಭದಲ್ಲಿ ಮುಸ್ಲಿಮರು ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ, ಯಾರು ಕಲ್ಲು ಎಸೆದಿದ್ದಾರೋ ಅವರ ಮೇಲೆ ಕ್ರಮ ಜರುಗಿಸಲಾಗಿದೆ. ಅವರು ಯಾವ ಪಕ್ಷದವರೇ ಆಗಿದ್ದರೂ, ಯಾರೇ ಆಗಿದ್ದರೂ ಅವರನ್ನು ಬಿಡಬೇಡಿ, ಕಾನೂನು ಕೈಗೆತ್ತಿಕೊಳ್ಳಲು ಬಿಡಬೇಡಿ ಎಂದು ಬಹಳ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.

ಕುಡಿತ ತಪ್ಪಿಸಲು ಸಾಧ್ಯವಿಲ್ಲ: ಸೂಕ್ತ ಪ್ರದೇಶಗಳಲ್ಲಿ ಬಾರ್ ಗಳನ್ನು ತೆರೆಯಲಾಗುವುದು.

ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ, ಮಾಲ್ ಹಾಗೂ ಸೂಪರ್ ಮಾರ್ಕೆಟ್ಗಳಲ್ಲಿ ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಿಗೆ  ಪರವಾನಗಿ ನೀಡಲು ಚಿಂತನೆ ನಡೆಸಿದೆ ಎಂಬ ವಿಚಾರ ಕುರಿತು ರಾಮನಗರದಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ‘ಕುಡಿಯುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಾಗುವುದಿಲ್ಲ. ಕಳೆದ 30 ವರ್ಷದಿಂದ ಯಾವುದೇ ಅಬಕಾರಿ ಲೈಸೆನ್ಸ್ ನೀಡಿಲ್ಲ, ಹಳ್ಳಿಯಲ್ಲಿ ನಾವು ಬಾರ್ ತೆಗೆಯುವುದಿಲ್ಲ. ಈ ಕುರಿತು ಚರ್ಚಿಸಿ ಸೂಕ್ತ ಪ್ರದೇಶಗಳಲ್ಲಿ ಬಾರ್ ಗಳನ್ನು ತೆರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ನಡೆದಿದ್ದ ರಾಗಿಗುಡ್ಡಕ್ಕೆ ಬಿಜೆಪಿ ನಾಯಕರ ಸತ್ಯಶೋಧನಾ ತಂಡ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ನಾವು ಸೂಜಿತರಹ ಕೆಲಸ ಮಾಡಿದರೇ ಬಿಜೆಪಿ ಕತ್ತರಿ ತರಹ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಬಿಜೆಪಿ ಅವರ ಸತ್ಯಶೋಧಕ ಏನಿದೆ? ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಾವು ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತಿದ್ದೇವೆ. ನಾವು ಸೂಜಿ ತರಹ ಹೋಲಿಯುವ ಕೆಲಸ ಮಾಡುತ್ತಿದ್ದರೆ ಅವರು ಕತ್ತಿ ತರಹ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದೇ ಬಿಜೆಪಿಗೂ, ಕಾಂಗ್ರೆಸ್ಗೂ ಇರುವ ವ್ಯತ್ಯಾಸ ಎಂದು ವಾಗ್ದಾಳಿ ನಡೆಸಿದರು.

 

Related posts

ವಯೋವೃದ್ಧರೊಬ್ಬರ ನ್ಯಾಯಾಂಗ ಹೋರಾಟ: ಸರ್ಕಾರಿ ನೌಕರರ ವಿರುದ್ಧ ಕಿಡಿ ಕಾರಿದ ಹೈಕೋರ್ಟ್

ಇನ್ಮುಂದೆ ಹುಲಿ ಉಗುರು ಪೆಂಡೆಂಟ್ ಧರಿಸಿ ಶೋಕಿ ಮಾಡಿದ್ರೆ ಎಚ್ಚರ: ಟಫ್ ರೂಲ್ಸ್ ಜಾರಿ.

ರಾಗಿಗುಡ್ಡದಲ್ಲಿ ಗಲಾಟೆ ಪ್ರಕರಣ: ನಾಲ್ವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್.