ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ: ಹೆಚ್.ಡಿ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ.

ಬೆಂಗಳೂರು,:ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಬಂಡಾಯವೆದ್ದಿದ್ದ ಸಿಎಂ ಇಬ್ರಾಹಿಂಗೆ ಜೆಡಿಎಸ್ ನಾಯಕರು ಶಾಕ್ ನೀಡಿದ್ದು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂರನ್ನ ಉಚ್ಚಾಟನೆ ಮಾಡಲು ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ಮಾಡಲಾಗಿದೆ.

ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಸಿಎಂ ಇಬ್ರಾಹಿಂ ಅವರನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದ್ದು ನೂತನ ಜೆಡಿಎಸ್ ಅಧ್ಯಕ್ಷರಾಗಿ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಘೋಷಿಸಿದರು.

ಜೆಡಿಎಸ್ ಕೋರ್ ಕಮಿಟಿ ಸಭೆ ಬಳಿಕ ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ ಹೆಚ್ ಡಿ ದೇವೇಗೌಡರು, ನಾವು ಇಂದು ಸಭೆಯೊಂದನ್ನ ಕರೆದಿದ್ದೆವು. ಕೆಲವು ಪಕ್ಷದ ನಿಯಮಾವಳಿಗಳು ಕೂಡ ಇದ್ದಾವೆ. ಪಕ್ಷದ ಕೆಲವು ಘಟಕಗಳ ಜೊತೆ ಸಮಾಲೋಚನೆ ಮಾಡಿ ಒಂದು ನಿರ್ಣಯ ಮಾಡಿದ್ದೇವೆ. ಜವಾಬ್ದಾರಿ ಸ್ಥಾನವನ್ನು ಮಾರ್ಪಾಡು ಮಾಡಬೇಕಿದೆ. ಚುನಾವಣೆ ಮುಗಿದು ನಾಲ್ಕು ತಿಂಗಳಾಗಿದೆ. ಇಬ್ರಾಹಿಂ ಅವರ ಹೇಳಿಕೆಗಳನ್ನು ನಾನು ಪ್ರಸ್ತಾಪ ಮಾಡಲು ಹೋಗಲ್ಲ, ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ. ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುಮಾರಸ್ವಾಮಿ ನೇಮಕ ಮಾಡಿದ್ದೇವೆ ಎಂದರು.

ನಾವು ಭಾರತೀಯ ಜನತಾ ಪಕ್ಷದ ಸರ್ಕಾರದಲ್ಲಿ ಭಾಗಿಯಾಗಿಲ್ಲ ಲೋಕಸಭಾ ಚುನಾವಣೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಹೆಚ್.ಡಿ ದೇವೇಗೌಡರು ಹೇಳಿದರು.

Related posts

ರಾಜ್ಯ ಸಾರಿಗೆ ನೌಕರಿಗೆ ಭರ್ಜರಿ ಗುಡ್ ನ್ಯೂಸ್..

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಹೊಸ ಪ್ಲಾನ್: ಇನ್ಮುಂದೆ ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲೆ ಶಿಕ್ಷಕರು..

ಕನ್ನಡ ಚಲನಚಿತ್ರಗಳು ಗೆಲ್ಲಲು ಚಿತ್ರಮಂದಿರಗಳ ಸಂಖ್ಯೆ ಹೆಚ್ಚಾಗಬೇಕಿದೆ-ನಿರ್ಮಾಪಕ ಹಾಗೂ ನಿರ್ದೇಶಕ ಪನ್ನಗಾಭರಣ